ನವದೆಹಲಿ: ಹಿಜಾಬ್ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ತಾರಕಕ್ಕೇರಿದೆ. ಒಂದೆಡೆ ಹಿಜಾಬ್ ಕುರಿತಾದ ಅರ್ಜಿ ವಿಚಾರಣೆ ಹೈಕೋರ್ಟ್ನಲ್ಲಿ ನಡೆಯುತ್ತಿದ್ದರೆ, ಇನ್ನೊಂದೆಡೆ ಶಾಲಾ ಕಾಲೇಜುಗಳಲ್ಲಿ ಪರ-ವಿರೋಧ ಪ್ರತಿಭಟನೆಗಳು ತೀವ್ರಗೊಂಡಿವೆ. ಈ ಮಧ್ಯೆ ಮೂರು ದಿನಗಳ ಕಾಲ ಶಾಲಾ ಕಾಲೇಜು ರಜೆ ಘೋಷಿಸಿ ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್ ಅಶ್ವತ್ಥನಾರಾಯಣ ಆದೇಶಿಸಿದ್ದಾರೆ.