ʼಹೈಕೋರ್ಟ್‌ ತ್ರಿಸದಸ್ಯ ಪೀಠʼದ ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ‌ʼಹಿಜಾಬ್-ಶಾಲು ಧರಿಸುವಂತಿಲ್ಲʼ

ಬೆಂಗಳೂರು: ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು ಎಂದಿದೆ. ಈ ಕುರಿತು ಮೌಖಿಯ ಆದೇಶ ನೀಡಿದ ಹೈಕೋರ್ಟ್ ಸಿಜೆ, ‘ ಮುಂದಿನ ವಿಚಾರಣೆಯನ್ನ ಸೋಮವಾರ ಮಧ್ಯಹ್ನ 2.30ರವರೆಗೆ ಮುಂದೂಡಲಾಗಿದೆ.

ಈಗ ಈಗ ಮಧ್ಯಂತರ ಆದೇಶ ನೀಡಲು ಬಯಸುತ್ತೇವೆ. ಅದ್ರಂತೆ, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು. ವಿಚಾರಣೆ ಮುಗಿಯುವವರೆಗೂ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಶಾಲು ಧರಿಸುವಂತಿಲ್ಲ’ ಎಂದಿದ್ದಾರೆ. ‘ರಾಜ್ಯದಲ್ಲಿ ಶಾಂತಿ ನೆಮ್ಮದಿ ಮರಳಬೇಕು.

ಕೆಲವು ದಿನಗಳ ಕಾಲ ನೀವು ನಿಮ್ಮ ನಂಬಿಕೆ ಬಿಡುವುದು ಒಳ್ಳೆಯದು. ಕೆಲವೇ ದಿನಗಳಲ್ಲಿ ಅಂತಿಮ ತೀರ್ಪು ಪ್ರಕಟಿಸುತ್ತೇವೆ. ಅಲ್ಲಿಯವರೆಗೆ ಧಾರ್ಮಿಕ ಗುರುತುಗಳನ್ನ ಬಳಸಬಾರದು’ ಎಂದಿದ್ದಾರೆ. ಇನ್ನು ರಾಜ್ಯದಲ್ಲಿ ಶಾಲಾ-ಕಾಲೇಜುಗಳನ್ನ ಶೀಘ್ರದಲ್ಲೇ ಪ್ರಾರಂಭಿಸಬೇಕು ಎಂದು ನ್ಯಾಯಾಧೀಶರು ಸೂಚಿಸಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading