2011ರ ಜನಗಣತಿ ಯನ್ನು ಆದರಿಸಿ ಪರಿಶಿಷ್ಟ ಪಂಗಡ ಮೀಸಲಾತಿ ಶೇಕಡ 7.5 ಹೆಚ್ಚಳ ಮಾಡಬೇಕು ಅಥವಾ ಅದಕ್ಕಿಂತಲೂ ಹೆಚ್ಚು ಮಾಡಬೇಕು -ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ

ಪರಿಶಿಷ್ಟ ಪಂಗಡಕ್ಕೆ ಶೇಕಡ 7. 5ರಷ್ಟು ಮೀಸಲಾತಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಏಕಾಂಗಿಯಾಗಿ ಇಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಗುರುವಾರ ಇಲ್ಲಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸತ್ಯಾಗ್ರಹ ಆರಂಭಿಸುವ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಪರಿಶಿಷ್ಟ ಪಂಗಡಕ್ಕೆ ಹೊಸದಾಗಿ ಕೆಳಜಾತಿಗಳನ್ನು ಸೇರ್ಪಡೆ ಮಾಡಲಾಗುತ್ತದೆ. ಆದರೆ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವುದಿಲ್ಲ ಎಂದು ಹೇಳಿದರು.

2011ರ ಜನಗಣತಿ ಯನ್ನು ಆದರಿಸಿ ಪರಿಶಿಷ್ಟ ಪಂಗಡ ಮೀಸಲಾತಿ ಶೇಕಡ 7.5 ಹೆಚ್ಚಳ ಮಾಡಬೇಕು ಅಥವಾ ಅದಕ್ಕಿಂತಲೂ ಹೆಚ್ಚು ಮಾಡಬೇಕು.ಈ ಹಿಂದೆಯೇ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ಸತ್ಯಾಗ್ರಹಕ್ಕೆ ತೀರ್ಮಾನ ಮಾಡಲಾಗಿತ್ತು. ಆದರೆ ಆ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪನವರು ಭರವಸೆ ನೀಡಿದ್ದರು. ಹೀಗಾಗಿ ಹೋರಾಟ ಕೈಬಿಡಲಾಗಿತ್ತು. ಆದರೆ ಇದೀಗ ಅವರು ನೀಡಿದ ಭರವಸೆ ಈಡೇರಿಸಿಲ್ಲ. ಹೀಗಾಗಿ ಮತ್ತೊಮ್ಮೆ ಸತ್ಯಾಗ್ರಹ ಆರಂಭಿಸಲಾಗಿದೆ. ಸರ್ಕಾರ ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಫೆಬ್ರವರಿ 17ಕ್ಕೆ ವಿಧಾನಸೌಧ ಚಲೋ..

ಎಸ್ಟಿ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ನೀಡಿ ನ್ಯಾಯಮೂರ್ತಿ ನೇತೃತ್ವದ ಸಮಿತಿ ವರದಿ ಅನುಷ್ಠಾನಕ್ಕೆ ಆಗ್ರಹಿಸಿ ಫೆಬ್ರವರಿ 17ಕ್ಕೆ ನಾಯಕ ಸಮಾಜದ ಸಮಾನ ವಯಸ್ಕರ ಒಕ್ಕೂಟದ ನೇತೃತ್ವದಲ್ಲಿ ವಿಧಾನಸೌಧ ಚಲೋ ಹಮ್ಮಿಕೊಂಡಿದೆ.ಅಂದು ಬೆಳಗ್ಗೆ 9.00 ಗಂಟೆಗೆ ಇಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕೇಂದ್ರ ರೈಲ್ವೆ ನಿಲ್ದಾಣದಿಂದ ರ್ಯಾಲಿ ಆರಂಭವಾಗಲಿದ್ದು, ಅಲಿನ ಕೋಡೆಸ್ ವೃತ್ತದಿಂದ ಆನಂದರಾವ್ ವೃತ್ತ ಶೇಷಾದ್ರಿ ರಸ್ತೆ ಮಾರ್ಗವಾಗಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನವನ ಮೆರವಣಿಗೆ ನಡೆಸಲಿದ್ದು. ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಲಾಗಿದೆ.

ನಕಲಿ ಜಾತಿ ಪ್ರಮಾಣ ಪತ್ರದ ಹಾವಳಿಗೆ ಕಡಿವಾಣ. ತಳವಾರ. ಪರಿವಾರ ಸಮಸ್ಯೆ ಬಗ್ಗೆ ಸ್ಪಷ್ಟತೆ. ಈಗಾಗಲೇ ಕಡಿತಗೊಳಿಸಿ ರುವ ಶೇಕಡ 70ರಷ್ಟು ಅನುದಾನವನ್ನು ಸೇರಿಸಿ ಬಜೆಟ್ ಘೋಷಣೆ ಮಾಡಬೇಕು. ತಕ್ಷಣವೇ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಬೇಡಿಕೆಗೆ ತಕ್ಕ ನವನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆ ಎಂದು ಮಾಡಿದರೆ ಸಾಲದು. ಅಧಿಕಾರವುಳ್ಳ ಆಯುಕ್ತರು . ಕಾರ್ಯದರ್ಶಿಯನ್ನು ಕೂಡಲೇ ನೇಮಿಸಬೇಕು ಎಂದು ಆಗ್ರಹಿಸಲಾಗಿದೆ.

Discover more from Valmiki Mithra

Subscribe now to keep reading and get access to the full archive.

Continue reading