ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡುವಂತೆ ಸಿಪಿಎಂ ಕಾರ್ಯಕರ್ತರು ಇಂದು ನಗರದಲ್ಲಿ ಪ್ರತಿಭಟನೆ ಮಾಡಿ ಒತ್ತಾಯ ಮಾಡಿದರು.
ಪ್ರತಿಭಟನೆ ನೇತೃತ್ವವಹಿಸಿ ಮಾತನಾಡಿದ ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯದರ್ಶಿ ಎಂ. ಪಿ. ಮುನಿವೆಂಕಪ್ಪ ರಾಜ್ಯದಲ್ಲಿ ದಿನೇ, ದಿನೇ ಕೋಮುಗಲಭೆಗಳನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಮತ್ತು ಕೋಮುವಾದಿ ಬಿಜೆಪಿ ಸರ್ಕಾರ ವಿದ್ಯಾರ್ಥಿಗಳಲ್ಲಿರುವ ಭಾವಕ್ಯತೆಯನ್ನು ಮುರಿಯಲು ವಾಮ ಮಾರ್ಗದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಎಂದು ಬಣ್ಣ ಅಚ್ಚಿ ರಾಜ್ಯದಲ್ಲಿ ಅರಾಜಕತೆ ಹೆಚ್ಚಾಗುತ್ತಿದೆ ಇದನ್ನು ಹತೋಟಿಯನ್ನು ಕೋಮುವಾದಿ ಸಂಘಟನೆಗಳಿಗೆ ಪರೋಕ್ಷವಾಗಿ ಬೆಂಬಲಿಸುತ್ತಿದ್ದಾರೆ ಎಂದರು .
ಕೂಡಲೇ ಮಾನ್ಯ ಮುಖ್ಯಮಂತ್ರಿಗಳು ವಿವಾದನಿಲ್ಲಿಸಿ ಶಾಂತಿ ಸವಾರ್ದತೆಯನು ಸಂರಕ್ಷಣೆ ಮಾಡಬೇಕೆಂದು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಮಾನವ ಸರಪಳಿಯನ್ನು ಮಾಡಿ ಪ್ರತಿಭಟಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಡಾ.ಅನಿಲ್ ಕುಮಾರ್, ಮುನಿಕೃಷ್ಣಪ್ಪ, ಅಶ್ವತ್ಥಪ್ಪ, ಸಾವಿತ್ರಮ್ಮ ಮತ್ತಿತರರು ಹಾಜರಿದ್ದರು.