ಸುರಪುರ: ನಗರದಲ್ಲಿ ಸರಕಾರಿ ಪಾಲಿಟೆಕ್ನಿಕ್ ಸುರಪುರ ಸಂಸ್ಥೆಯ ಮುಖ್ಯ ಕಟ್ಟಡ ಕಾರ್ಯಾಗಾರ 7 ಹೆಚ್ಚುವರಿ ಕೊಠಡಿಗಳು ಮತ್ತು ಬಾಲಕರ /ಬಾಲಕಿಯರ ವಸತಿ ನಿಲಯಗಳ ಕಾಮಗಾರಿಯನ್ನು ಮಾನ್ಯ ಉನ್ನತ ಶಿಕ್ಷಣ .ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ,ಐಟಿ ಮತ್ತು ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಶ್ರೀ ಡಾ. ಸಿ ಎನ್ . ಅಶ್ವಥ್ ನಾರಾಯಣ ಉದ್ಘಾಟಿಸಿದರು .
ಈ ಸಂದರ್ಭದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ನರಸಿಂಹ ನಾಯಕ ರಾಜುಗೌಡ್ರು .ರಾಯಚೂರು ಲೋಕಸಭಾ ಸದಸ್ಯರಾದ ಶ್ರೀ ಅಮರೇಶ ನಾಯಕ ಅವರು ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.