ಬೆಂಗಳೂರು: ವಾಲ್ಮೀಕಿ ನಾಯಕ ಜನಾಂಗಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕೆಂದು ಶಾಸಕರಾದ ರಾಜುಗೌಡ, ಸಚಿವ ಆನಂದ್ ಸಿಂಗ್ ಸೇರಿದಂತೆ ಮತ್ತಿತರರು ಶುಕ್ರವಾರದಂದು ಸಚಿವ ಸಂಪುಟದ ಬಿಡುವಿನ ವೇಳೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ರಾಜುಗೌಡ ಮಾತನಾಡಿ ನಾಯಕ ವಾಲ್ಮೀಕಿ ಜನಾಂಗಕ್ಕೆ ಮುಖ್ಯಮಂತ್ರಿ ಇದ್ದಾಗಿನಿಂದಲೂ ಮೀಸಲಾತಿಗಾಗಿ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಗಿತ್ತು, ಆದರೆ ಇದುವರೆಗೆ ಯಾವುದೇ ಸರ್ಕಾರದಿಂದ ಆದೇಶ ನೀಡಿದ ಹಿನ್ನೆಲೆಯಲ್ಲಿ ನಮ್ಮ ಪೀಠದ ಪರಮ ಪೂಜ್ಯ ಗುರುಗಳಾದ ಪ್ರಸನ್ನಾನಂದಪುರಿ ಸ್ವಾಮಿಗಳು ಅನಿರ್ದಿಷ್ಟ ಧರಣಿ ನಡೆಸುತ್ತಿದ್ದು, ಮೀಸಲಾತಿ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚಿಸುವ ಅವಶ್ಯಕತೆ ಇದೆಯೆಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಗಮನಕ್ಕೆ ತಂದಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಸಚಿವ ಆನಂದ್ ಸಿಂಗ್ ಹಾಗೂ ಶಾಸಕರುಗಳಾದ ರಾಜುಗೌಡ ನಾಯಕ. ರಾಮನಗೌಡ ತುರುವಿಹಾಳ. ಎಸ್ .ವಿ ರಾಮಚಂದ್ರಪ್ಪ ಈ ತುಕಾರಾಂ ಬಸವನಗೌಡ ದದ್ದಲ್ ಇನ್ನಿತರರು ಸಮಾಜದ ಮುಖಂಡರು ಸೇರಿದಂತೆ ಉಪಸ್ಥಿತರಿದ್ದರು.