ಬೆಳಗಾವಿ: ದಿನಾಂಕ 21-02-2022 ರಂದು ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಹಾಗೂ ಜನಪ್ರಿಯ ಯಮಕನ ಮರಡಿ ಶಾಸಕರಾದ ಸತೀಶ್ ಜಾರಕಿಹೊಳಿಯವರ ಸೂಚನೆ ಮೇರೆಗೆ ಮತ್ತು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಅವರ ನೇತೃತ್ವದಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ರಾಜ್ಯ ಬಿಜೆಪಿ ಸರ್ಕಾರದ ಸಚಿವರದ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣವೇ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಾನ್ಯ ಜಿಲ್ಲಾಧಿಕಾರಿಗಳ ಮುಖಾಂತರ ಗೌರವಾನ್ವಿತ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿಗಳಾದ ಪ್ರದೀಪ , ಎಮ್.ಜಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಬಾಳೇಶ ದಾಸನಟ್ಟಿಯವರು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕರ ಘಟಕದ ಅಧ್ಯಕ್ಷರಾದ ಶ್ರೀ ಮಂಜುನಾಥ ಕಾಂಬ್ಳಿ ಅವರ ಹಾಗೂ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು. ಕಾಂಗ್ರೆಸ್ ಹಿರಿಯ ಮುಖಂಡರು ಯುವ ಕಾರ್ಯಕರ್ತರು ಭಾಗವಹಿಸಿದ್ದರು.