ಬೆಂಗಳೂರು: ಡಿ.ಕೆ.ಶಿವಕುಮಾರ್, ಈಶ್ವರಪ್ಪನವರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರಿಂದಲೇ ಜಂಟಿ ಅಧಿವೇಶನ ನಡೆಯದೆ ಅರ್ಧಕ್ಕೇ ಮೊಟಕಾಯಿತು. ಇದಕ್ಕೆ ಕಾಂಗ್ರೆಸ್‍ನವರೇ ನೇರ ಕಾರಣ ಎಂದು ಸಚಿವ ಡಾ.ಸಿ.ಎನ್.ಅಶ್ವಥ್ ನಾರಯಣ್ ಗಂಭೀರ ಆರೋಪ ಮಾಡಿದ್ದಾರೆ.
ನೂರಾರು ವರ್ಷಗಳ ಇತಿಹಾಸವಿರುವ ಕಾಂಗ್ರೆಸ್ ಸದಸ್ಯರಿಗೆ ಅವೇಶನ ನಡೆಯುವಾಗ ಹೇಗೆ ನಡೆದುಕೊಳ್ಳಬೇಕೆಂಬ ಕನಿಷ್ಟ ಜ್ಞಾನವೂ ಇಲ್ಲ. ಡಿ.ಕೆ.ಶಿವಕುಮಾರ್ ಗೂಂಡಾಗಿರಿಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.ಕಾಂಗ್ರೆಸ್ ಪಕ್ಷ ಸಮಾಜದಲ್ಲಿ ಸಮಸ್ಯೆ, ಗೊಂದಲ, ದ್ವೇಷ ಉಂಟುಮಾಡುತ್ತಿದೆ. ಸುಳ್ಳು ವಿಚಾರವನ್ನೆ ಸತ್ಯ ಎಂದು ಹೇಳುತ್ತಿದೆ. ಹಿಜಾಬ್ ವಿಚಾರದಲ್ಲಿ ರಾಷ್ಟ್ರಧ್ವಜವನ್ನು ಇಳಿಸಿ ಕೇಸರಿ ಧ್ವಜವನ್ನು ಹಾರಿಸಿದ್ದಾರೆ ಎಂದು ಸುಳ್ಳು ಹೇಳಿಕೆ ನೀಡಿದರು ಎಂದು ಆರೋಪಿಸಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಅವಯಲ್ಲಿ ಹಿಂದೂ ಕಾರ್ಯಕರ್ತರ ಕೊಲೆ ಪ್ರಕರಣಗಳನ್ನು ನಾವು ಈಗ ಅವಲೋಕನ ಮಾಡುತ್ತಿದ್ದೇವೆ. ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತದೆ. ಹತ್ಯೆಯಾದವರ ಕುಟುಂಬಗಳ ಜೊತೆಯಲ್ಲಿ ನಮ್ಮ ಕಾರ್ಯಕರ್ತರು ಸಂಪರ್ಕದಲ್ಲಿ ಇದ್ದಾರೆ ಎಂದು ಹೇಳಿದರು.ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ವಿಚಾರವಾಗಿ ನಾವು ಎಂದೂ ಕಾವೇರಿ ವಿಚಾರದಲ್ಲಿ ರಾಜಕಾರಣ ಮಾಡಲಿಲ್ಲ. ಮೇಕೆದಾಟು ಯೋಜನೆಯನ್ನು ಅನುಷ್ಠಾನ ಮಾಡುವಲ್ಲಿ ಕಾಂಗ್ರೆಸ್ ವಿಫಲವಾಗಿದೆ. ಜನರಿಗೆ ನೀರು ಕೊಡುವ ಸದುದ್ದೇಶ ಅವರಿಗಿಲ್ಲ ಎಂದು ದೂರಿದರು.
ನಮ್ಮ ಸರ್ಕಾರ ಬಂದ ಮೇಲೆ ಡಿಪಿಆರ್ ಆಗಿದೆ. ಯಾವ ಜನ್ಮಕ್ಕೂ ಮೇಕೆದಾಟು ಯೋಜನೆ ಅನುಷ್ಠಾನ ಮಾಡಲು ಕಾಂಗ್ರೆಸ್‍ಗೆ ಸಾಧ್ಯವಿಲ್ಲ. ತಮಿಳುನಾಡಿನಲ್ಲಿ ಡಿಎಂಕೆ ಪಕ್ಷ ಇದೆ. ಮೇಕೆದಾಟು ಅನುಷ್ಠಾನಕ್ಕೆ ನಾವು ಬದ್ಧರಿದ್ದೇವೆ ಎಂದು ತಿಳಿಸಿದರು.
ನೀರಾವರಿ ಯೋಜನೆ ಆಗಿದ್ದರೆ ನಮ್ಮ ಅವಯಲ್ಲಿ ರಾಮನಗರದಲ್ಲಿ ಶೇ.2.5 ಮಾತ್ರ ನೀರಾವರಿ ಪ್ರದೇಶ ಇದೆ. ಮಾರ್ಗಸೂಚಿ ಪ್ರಕಾರ ಶೇ.25ರಷ್ಟು ನೀರಾವರಿ ಪ್ರದೇಶ ಇರಬೇಕು. ಮಾಗಡಿಯಲ್ಲಿ ಶೇ.8ರಷ್ಟು ಮಾತ್ರ ನೀರಾವರಿ ಪ್ರದೇಶ ಇದೆ ಎಂದರು.