ಬೆಂಗಳೂರು : ರಾಜ್ಯಾದ್ಯಂತ ಇಂದು ಪಲ್ಸ್ ಪೋಲಿಯೋ ಅಭಿಯಾನವು ಆರಂಭಗೊಂಡಿದ್ದು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿ ಮಾಡಲು ಕೇಂದ್ರ ಸರ್ಕಾರ ಪ್ರತಿ ವರ್ಷ ಅನೇಕ ಅರೋಗ್ಯ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತದೆ ಅದರಂತೆ ಫೆಬ್ರವರಿ ತಿಂಗಳಿನಲ್ಲಿ 4ದಿನ (27/02/2022 ರಿಂದ 02/03/2022)ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಇಂದು ಶಾಸಕ ಸುರೇಶ್ ಕುಮಾರ್ ಕಾಮಾಕ್ಷಿಪಾಳ್ಯ ಬಿಬಿಎಂಪಿ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾಜಿ ಉಪ ಮಹಾಪೌರರು ರಂಗಣ್ಣ ಕಾರ್ಪೊರೇಟರ್ ಪ್ರತಿಭಾ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಶೋಭಾ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸುರೇಶ್ ಕುಮಾರ್ ಸರ್ಕಾರವು ಜನರ ಆರೋಗ್ಯ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳ ಹಮ್ಮಿಕೊಂಡಿದ್ದು ಎಲ್ಲವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಹಾಗೂ ಪ್ರತಿಯೊಬ್ಬರು ಕರೋನ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳ ಕಾರ್ಯಕ್ಷಮತೆಯನ್ನು ಕಂಡು ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಇನ್ನು 3ದಿನ ಈ ಕಾರ್ಯಕ್ರಮವು ನಡೆಯಲಿದ್ದು ಎಲ್ಲ ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ ಎಂದು ಸಾರ್ವಜನಿಕರಿಗೆ ಕರೆಕೊಟ್ಟರು.