ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಫೆಬ್ರವರಿ 25 ರಂದು ಸಿಮಂತ ಕಾರ್ಯಕ್ರಮದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿತ್ತು. ಈ ಘಟನೆಯಲ್ಲಿ 24 ಜನರು ಗಂಭೀರವಾಗಿ ಗಾಯಗೊಂಡಿದ್ದರು.
ಗಾಯಾಳುಗಳನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಗರ ಗ್ರಾಮದ ಭೀಮರಾಯ (78) ಜಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನು ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೀರಬಸಪ್ಪ ಸಹ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಇಲ್ಲಿಯವರೆಗೆ ಏಳು ಜನರು ಸಾವನ್ನಪ್ಪಿದ್ದಾರೆ. 17 ಜನರಲ್ಲಿ 16 ಜನರಿಗೆ ಕಲಬುರಗಿಯ ಜೀಮ್ಸ್ ಹಾಗೂ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಓರ್ವ ವ್ಯಕ್ತಿಯನ್ನು ಮಹಾರಾಷ್ಟ್ರದ ಸೋಲಾಪೂರನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯುಕೆಪಿ ಕ್ಯಾಂಪ್ ನ ನಿವೃತ್ತ ನೌಕರ ಸಾಹೇಬಗೌಡ ಅವರ ಮನೆ ಮುಂಭಾಗದಲ್ಲಿ ಈ ಘಟನೆ ನಡೆದಿತ್ತು. ಸಾಹೇಬ ಗೌಡ ಅವರ ಸೊಸೆಯ ಸೀಮಂತ ಕಾರ್ಯಕ್ರಮ ನಡೆಸಲಾಗುತಿತ್ತು.ಈ ವೇಳೆ ಅಡುಗೆ ಮಾಡಲು ತಂದಿಟ್ಟಿದ್ದ ಸಿಲಿಂಡರ್ ಸೋರಿಕೆಯಾಗಿ ಬ್ಲಾಸ್ಟ್ ಆಗಿತ್ತು.