ನಟ ಧ್ರುವ ಸರ್ಜಾ ಅವರು ಶೂಟಿಂಗ್ ಕೆಲಸಗಳಿಂದ ಕೊಂಚ ಬಿಡುವು ಮಾಡಿಕೊಂಡಿದ್ದಾರೆ. ಆ ಬಿಡುವಿನಲ್ಲಿ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ಅವರು ಮಂತ್ರಾಲಯಕ್ಕೆ ತೆರಳಿದ್ದಾರೆ. ಗುರುವಾರ ರಾಯರ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭದೇಂದ್ರ ತೀರ್ಥರ ಆಶೀರ್ವಾದ ಪಡೆದಿದ್ದಾರೆ. ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ.
ಮಂತ್ರಾಲಯದಲ್ಲಿ ಧ್ರುವ ಸರ್ಜಾ ಅವರನ್ನು ಕಂಡ ಅಭಿಮಾನಿಗಳು ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದಿದ್ದಾರೆ. ಸೆಲ್ಫಿಗೆ ಪೋಸ್ ನೀಡುವ ಮೂಲಕ ಅಭಿಮಾನಿಗಳನ್ನು ಧ್ರುವ ಖುಷಿಪಡಿಸಿದ್ದಾರೆ.
ಎಲ್ಲರಿಗೂ ನಗುಮುಖದಲ್ಲೇ ಧ್ರುವ ಸರ್ಜಾ ಫೋಟೋಗೆ ಪೋಸ್ ನೀಡಿದ್ದಾರೆ. ರಾಘವೇಂದ್ರ ಸ್ವಾಮಿಗಳ ತೇರನ್ನು ಸಹ ಧ್ರುವ ಸರ್ಜಾ ಎಳೆದಿದ್ದಾರೆ. ಸುಭದೇಂದ್ರ ತೀರ್ಥರು ಧ್ರುವ ಸರ್ಜಾ ಅವರಿಗೆ ಗುರುಗಳ ಪ್ರತಿಮೆಯನ್ನು ನೀಡಿದ್ದಾರೆ. ಇನ್ನೂ ಧ್ರುವ ಸರ್ಜಾ ಕಾರು ಹತ್ತುವ ವೇಳೆ ಜನರು ಗುಂಪು ಸೇರಿ ಫೋಟೋಗೆ ಮುಗಿಬಿದಿದ್ದರು.