ಮೈಸೂರು: ರಷ್ಯಾದ ವಿರುದ್ಧ ನಾವು ಹೋಗಲು ಕಷ್ಟವಿದೆ. ತನ್ನ ಭದ್ರತೆ, ಸುರಕ್ಷತೆ ದೃಷ್ಟಿಕೋನದಲ್ಲಿ ರಷ್ಯಾ, ಉಕ್ರೇನ್ ಮೇಲೆ ಯುದ್ಧ ಮಾಡುತ್ತಿದೆ. ರಷ್ಯಾದ ಮೇಲೆ ಭಾರತ ಅತಿ ಹೆಚ್ಚು ಅವಲಂಬಿತವಾಗಿದೆ. ಈ ಅವಲಂಬನೆ ಸೃಷ್ಟಿಸಿದ್ದೇ ಕಾಂಗ್ರೆಸ್. ರಷ್ಯಾವನ್ನು ಎದುರು ಹಾಕಿಕೊಂಡರೆ ಮುಂದೆ ನಮಗೆ ಯುದ್ಧದಂತಹ ಸಂದರ್ಭ ಸೃಷ್ಟಿಯಾದರೆ ನಮ್ಮ ನೆರವಿಗೆ ರಷ್ಯಾ ಬರುತ್ತಾ? ಹೀಗಾಗಿ ಪ್ರಧಾನಿಗಳು ಈಗ ತಟಸ್ಥ ನಿಲುವಿಗೆ ಬಂದಿದ್ದಾರೆ. ಅಲ್ಲಿನ ಎಲ್ಲಾ ಭಾರತೀಯ ವಿದ್ಯಾರ್ಥಿಗಳ ರಕ್ಷಣಾ ಕಾರ್ಯ ವ್ಯವಸ್ಥಿತವಾಗಿ ಸಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇನ್ನು ಸಾಮಾಜಿಕ ಜಾಲ ತಾಣಗಳಲ್ಲಿ ನೀಟ್ ಬ್ಯಾನ್ ಕ್ಯಾಂಪೆನ್ ನಡೆಯುತ್ತಿರುವ ವಿಚಾರ ಪ್ರತಿಕ್ರಿಯಿಸಿದ ಅವರು, ನ್ಯಾಯಾಲಯದ ಆದೇಶಕ್ಕೆ ಅನುಗುಣವಾಗಿ ನೀಟ್ ತರಲಾಗಿದೆ. 138 ಕೋಟಿ ಜನಸಂಖ್ಯೆ ಇರುವ ದೇಶಕ್ಕೆ, ಒಂದೂವರೆ ಲಕ್ಷ ಮೆಡಿಕಲ್ ಸೀಟ್ ಇದೆ. ಇದರಿಂದ ಪೈಪೋಟಿ ಹೆಚ್ಚಾಗಿದೆ. ಪ್ರತಿ ಜಿಲ್ಲೆಯಲ್ಲೂ ಮೆಡಿಕಲ್ ಕಾಲೇಜ್ ಬರಬೇಕು. ಆಗ ಸೀಟು ಹೆಚ್ಚಾಗುತ್ತೆ, ಎಲ್ಲರಿಗೂ ಅವಕಾಶ ಸಿಗುತ್ತೆ ಎಂದರು.