ಕೋಲಾರ: ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಕಾಲಾವಧಿಯ ಉಚಿತ ಲಘು ವಾಹನ ಚಾಲನಾ (ಡ್ರೈವಿಂಗ್) ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 18 ರಿಂದ 45 ವರ್ಷ ವಯೋಮಿತಿಯುಳ್ಳ ಜಿಲ್ಲೆಯ ಗ್ರಾಮೀಣ ಭಾಗದ ಬಿ.ಪಿ.ಎಲ್ ರೇಷನ್ ಕಾರ್ಡ್ ಹೊಂದಿರುವ ಮಹಿಳೆಯರು ಮಾ.09, ಬುಧವಾರದಂದು ತರಬೇತಿ ಸಂಸ್ಥೆಯಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಆಧಾರ್ ಕಾರ್ಡ್, ರೇಷನ್ ಕಾರ್ಡ್, 3 ಪಾಸ್ ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊ.8971308776, 7760313833, 9483652240 ಸಂಪರ್ಕಿಸಬಹುದಾಗಿದೆ.
ಗೂಗಲ್ ಫಾರ್ಮ್ ಮೂಲಕ ಉಚಿತ ಡ್ರೈವಿಂಗ್ ತರಬೇತಿಗೆ ಆನ್ ಲೈನ್ ನಲ್ಲೇ ಅರ್ಜಿ ಸಲ್ಲಿಸಬಹುದು. ಅದರ ಲಿಂಕ್ https://docs.google.com/forms/d/1IW3iMi2q9d–KPTnTgEwESB7AigDublyKEJY7XCxZOY/edit?chromeless=1
ಆದಷ್ಟು ಈ ಮಾಹಿತಿಯನ್ನು ಶೇರ್ ಮಾಡಿ, ಅಗತ್ಯ ಇರುವವರಿಗೆ ಅನುಕೂಲವಾಗಬಹುದು.