ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.
ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುವ ಮೂಲಕ ಸರ್ಕಾರವು ವಿವಿಧ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣದತ್ತ ಗಮನ ಹರಿಸುತ್ತದೆ ಎಂದು ಹೇಳಿದ್ದಾರೆ.
ಮಹಿಳಾ ದಿನದಂದು, ನಮ್ಮ ನಾರಿ ಶಕ್ತಿ ಮತ್ತು ವಿವಿಧ ಕ್ಷೇತ್ರಗಳಲ್ಲಿನ ಅವರ ಸಾಧನೆಗಳಿಗೆ ನಾನು ವಂದಿಸುತ್ತೇನೆ. ಭಾರತ ಸರ್ಕಾರವು ಘನತೆ ಮತ್ತು ಅವಕಾಶಕ್ಕೆ ಒತ್ತು ನೀಡುವ ಮೂಲಕ ತನ್ನ ವಿವಿಧ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣದತ್ತ ಗಮನ ಹರಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.