ಬೆಂಗಳೂರು: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಶಿಕ್ಷಣ ಮತ್ಚು ಉದ್ಯೋಗಕ್ಕಾಗಿ ಶೇ. 7.5 ಮೀಸಲಾತಿ ನೀಡುವ ಭರವಸೆಯನ್ನು ನೀಡಿತ್ತು. ಆದರೆ ಇನ್ನು ಈಡೇರಿಲ್ಲ ಎಂದು ಹೆಚ್.ಡಿ.ಕೋಟೆಯ ಶಾಸಕ ಅನಿಲ್ ಚಿಕ್ಕಮಾದು ಒತ್ತಾಯಿಸಿದರು.
ಸದನದಲ್ಲಿ ಮಾತನಾಡಿದ ಅವರು, ನಾಗಮೋಹನದಾಸ್ ವರದಿಯನ್ನು ತಕ್ಷಣವೇ ಜಾರಿಗೊಳಿಸಬೇಕು. ಇದು ಸಾಕಷ್ಟು ವರ್ಷಗಳಿಂದ ಬಾಕಿ ಉಳಿದಿದೆ. ನಾಯಕ ಜನಾಂಗದವರು ಶೈಕ್ಷಣಿಕವಾಗಿ ಮತ್ತು ಉದ್ಯೋಗ ಇಲ್ಲದೆ ಹಿಂದೆ ಉಳಿದಿದ್ದಾರೆ ಎಂದು ತಿಳಿಸಿದರು.
ಸುಮಾರು 40 ವರ್ಷಗಳಿಂದ ನಾಯಕ ಸಮಾಜದವರು ಹೋರಾಟವನ್ನು ನಿರಂತರವಾಗಿ ಮಾಡುತ್ತಿದ್ದು ನಮ್ಮ ಹೋರಾಟಕ್ಕೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.