ಬೆಂಗಳೂರು: ಇಂಧನ ದರ ಏರಿಕೆ ಬೆನ್ನಲ್ಲೇ ಏಪ್ರಿಲ್ 1 ರಿಂದ ವಿದ್ಯುತ್ ಬೆಲೆ ಏರಿಕೆ ಸಾಧ್ಯತೆ ಇದೆ. ಜನ ಸಾಮಾನ್ಯರ ಜೇಬಿಗೆ ಮತ್ತಷ್ಟು ಹೊರೆಯಾಗುವ ಎಲ್ಲ ಸಾಧ್ಯತೆಗಳು ದಟ್ಟವಾಗಿದೆ.
ಈಗಾಗಗಲೇ ಇಂಧನ ಬೆಲೆ, ಗ್ಯಾಸ್, ಗ್ಯಾಸ್ ಅಡುಗೆ ಎಣ್ಣೆ ಬೆಲೆ ಏರಿಕೆಗೆ ತತ್ತರಿಸಿರುವ ಜನರಿಗೆ ಮತ್ತಷ್ಟು ಕತ್ತರಿ ಹಾಕಲು ವಿದ್ಯುತ್ ಇಲಾಖೆ ಸಿದ್ಧವಾಗಿದೆ. ರಾಜ್ಯದಲ್ಲಿ ವಿದ್ಯುತ್ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಮುಂದಾಗಿದೆ.
ಕೆಇಆರ್ಸಿ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ವಿದ್ಯುತ್ ಹೊಸ ದರ ಪರಿಷ್ಕರಣೆ ನಿರ್ಧಾರ ಕೈಗೊಳ್ಳಲಿದೆ. ಪ್ರತಿ ಯೂನಿಟ್ ಗೆ 35 ರಿಂದ 45 ಪೈಸೆ ಹೆಚ್ಚಳ ಸಾಧ್ಯತೆ ಇದೆ. ಈ ತಿಂಗಳ ಅಂತ್ಯದಲ್ಲಿ ಹೊಸ ವಿದ್ಯುತ್ ದರ ಪರಿಷ್ಕರಣೆ ಪಟ್ಟಿ ಬಿಡುಗಡೆ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ಬೆಸ್ಕಾಂ, ಮೆಸ್ಕಾಂ, ಚೆಸ್ಕಾಂ ಸೇರಿದಂತೆ ಇತರೆ ವಿದ್ಯುತ್ ಸರಬರಾಜು ಕಂಪನಿಗಳಿಂದ ವಿದ್ಯುತ್ ದರ ಪರಿಷ್ಕರಣೆಗೆ ಒತ್ತಡ ಹೇರಿವೆ. ಕಂಪನಿಗಳ ನಿರ್ವಹಣೆ ವೆಚ್ಚ ಹೆಚ್ಚಳ ಹಿನ್ನಲೆ ದರ ಪರಿಷ್ಕರಣೆ ಪಟ್ಟು ಹಿಡಿದಿವೆ. ಬೆಸ್ಕಾಂ ಪ್ರತಿ ಯೂನಿಟ್ ಗೆ 1.50 ರೂ. ಹೆಚ್ಚಿಸುವಂತೆ ಪ್ರಸ್ತಾವನೆ ಸಲ್ಲಿಸಿದೆ.
ಕೆಇಆರ್ಸಿ ಸಾರ್ವಜನಿಕರಿಗೆ ಹೊರೆಯಾಗದಂತೆ ವಿದ್ಯುತ್ ದರ ಪರಿಷ್ಕರಣೆ ಮಾಡಲಿದೆ. ಈಗಾಗಲೇ ವಿದ್ಯುತ್ ನಿಯಂತ್ರಣ ಆಯೋಗವು ಫೆಬ್ರವರಿಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹ ಮಾಡಿದೆ. ಅದರಿಂದ ಶೀಘ್ರದಲ್ಲೇ ಹೊಸ ವಿದ್ಯುತ್ ಪರಿಷ್ಕರಣೆ ದರ