ರಾಯಚೂರು: ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಟಣಕನಕಲ್ ಬಳಿ ಕೃಷ್ಣಾನದಿಯಲ್ಲಿ ಈಜಲು ಇಳಿದಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ.
ಸಂತೋಷ್ ಹಾಗೂ ಅನೀಲ್ ಕುಮಾರ್ ಮೃತ ಯುವಕರು. ಐವರು ಸ್ನೇಹಿತರೊಂದಿಗೆ ಯುವಕರು ಈಜಲು ನೀರಿಗೆ ಇಳಿದಿದ್ದಾರೆ.ನೀರಿನ ಸುಳಿಗೆ ಸಿಲುಕಿದ ಇಬ್ಬರು ಯುವಕರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಸಂತೋಷ್ ಎಂಬಾತನ ಮೃತದೇಹ ಪತ್ತೆಯಾಗಿದ್ದು, ಇನ್ನೋರ್ವ ಯುವಕ ಅನಿಲ್ ಕುಮಾರ್ ಗಾಗಿ ಶೋಧ ಕಾರ್ಯ ಮುಂದುವರೆದಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ