ರಾಜ್ಯ ಸಚಿವ ಸಂಪುಟ ಪುನಾರಚನೆಗೆ ಮುಹೂರ್ತ ಫಿಕ್ಸ್ : 6 ಸಚಿವರಿಗೆ ಕೊಕ್, ರಾಜು ಗೌಡರಿಗೆ ಸಚಿವ ಸ್ಥಾನ ಫಿಕ್ಸ್?

ಬೆಂಗಳೂರು: ಬಿಜೆಪಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಳಿಕ, ಸರ್ಕಾರ ಮತ್ತು ಪಕ್ಷದ ಮಟ್ಟದಲ್ಲಿ ಬದಲಾವಣಾ ಪ್ರಕ್ರಿಕೆಯಗಳು ಚುರುಕುಗೊಂಡಿವೆ. ಜೊತೆ ಜೊತೆಗೆ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಪುನಾರಚನೆಯೂ ಚುರುಕು ಪಡೆದಿದೆ.

ಇದೇ ಕಾರಣದಿಂದಾಗಿ ಇಂದು ಅಥವಾ ನಾಳೆ ದೆಹಲಿಗೆ ವರಿಷ್ಠರನ್ನು ಭೇಟಿ ಮಾಡೋದಕ್ಕಾಗಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮೇಕೆದಾಟು ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಸಂಬಂಧ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ ನಡೆಸುವ ಅಧಿಕೃತ ಕಾರ್ಯಕ್ರಮಗಳನ್ನು ಮುಂದಿಟ್ಟುಕೊಂಡು ಇಂದು ಮಧ್ಯಾಹ್ನವೇ ಸಿಎಂ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ರಾಜ್ಯ ಸಚಿವ ಸಂಪುಟ ಕಸರತ್ತಿಗೆ ವರಿಷ್ಠರ ಹಸಿರು ನಿಶಾನೆ ಪಡೆಯುವುದು ಎಂದು ತಿಳಿದುಬಂದಿದೆ

ಮುಂಬರುವ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟಕ್ಕೆ ಸರ್ಜರಿ ಮಾಡುಉವ ಉದ್ದೇಶವನ್ನು ಸಿಎಂ ಬೊಮ್ಮಾಯಿ ಹೊಂದಿದ್ದಾರೆ.ಸದ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ನಾಲ್ಕರಿಂದ ಆರು ಮಂದಿ ಹಾಲಿ ಸಚಿವರನ್ನು ಕೈಬಿಡುವ ಮೂಲಕ ಹೆಚ್ಚೂ ಕಡಿಮೆ ಹತ್ತು ಮಂದಿ ಹೊಸಬರಿಗೆ ಸಂಪುಟದಲ್ಲಿ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.

ಇನ್ನು ಬಿಜೆಪಿಯಲ್ಲಿ ನಿಷ್ಠಾವಂತ ಶಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ರಾಜು ಗೌಡರಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಶಿಫಾರಸ್ಸಿನ ಮೇರೆಗೆ ಹಾಗೂ ವಾಲ್ಮೀಕಿ ಸಮಾಜದ ಕೋಟಾದ ಅಡಿಯಲ್ಲಿ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

Discover more from Valmiki Mithra

Subscribe now to keep reading and get access to the full archive.

Continue reading