ಬೆಂಗಳೂರು : ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಪರೀಕ್ಷೆಯಿಲ್ಲದೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ ಬಡ್ತಿ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರಿಗೆ ಪರೀಕ್ಷೆಯಿಲ್ಲದೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ (6ರಿಂದ 8 ನೇ ತರಗತಿ) ಬಡ್ತಿ ನೀಡಲು ಶಿಕ್ಷಣ ಇಲಾಖೆ ನಿರ್ಣಯ ಕೈಗೊಂಡಿದ್ದು, ಎಷ್ಟು ಪ್ರಮಾಣದ ಹುದ್ದೆಗಳನ್ನು ಬಡ್ತಿ ಯಡಿ ಪರಿಗಣಿಸಬೇಕೆಂದು ಇನ್ನೊಂದು ವಾರದಲ್ಲಿ ಅಂತಿಮಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಸರ್ಕಾರದ ಈ ನಿರ್ಧಾರದಿಂದ 52 ಸಾವಿರ ಪದವೀಧರ ಶಿಕ್ಷಕ ಹುದ್ದೆಗಳಲ್ಲಿ ಕನಿಷ್ಟ 17 ಸಾವಿರ ಶಿಕ್ಷಕರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಒಂದು ವೇಳೆ ಶಿಕ್ಷಕರ ಬೇಡಿಕೆಯಂತೆ ಬಡ್ತಿ ಆಧಾರದಲ್ಲಿ ಭರ್ತಿ ಮಾಡುವ ಸ್ಥಾನಗಳನ್ನು ಶೇ. 50 ಕ್ಕೆ ಹೆಚ್ಚಿಸಿದಲ್ಲಿ 26 ಸಾವಿರ ಪದವೀಧರ ಶಿಕ್ಷಕರಿಗೆ ಬಡ್ತಿ ದೊರೆಯಬಹುದು ಎನ್ನಲಾಗಿದೆ.