ಬೆಂಗಳೂರು, ಏಪ್ರಿಲ್ 07;
ಬ್ಯಾಂಕ್ ಎಕ್ಸಿಕ್ಯುಟಿವ್ ಡೈರೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 22 ಏಪ್ರಿಲ್ ಕೊನೆಯ ದಿನವಾಗಿದೆ.
ಕರ್ನಾಟಕ ಬ್ಯಾಂಕ್ ನೇಮಕಾತಿ ನಿಯಮಗಳ ಅನ್ವಯ ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ನೀಡಲಾಗುತ್ತದೆ. ಒಂದು ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು.
ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಸಿಎ, ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಬೋರ್ಡ್‌ಗಳಿಂದ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳು ಸೇಲ್ಸ್/ ನಿರ್ವಹಣೆ ವಿಚಾರದಲ್ಲಿ 15 ವರ್ಷದ ಅನುಭವ ಹೊಂದಿರಬೇಕು. ಸೀನಿಯರ್ ಲೀಡರ್ ಶಿಪ್ ರೋಲ್, ಸಿಎಕ್ಸ್‌ಓ ವಿಭಾಗದಲ್ಲಿ ಎರಡು ವರ್ಷ ಕೆಲಸ ಮಾಡಿರಬೇಕು. ಕೋರ್ ಬ್ಯಾಂಕಿಂಗ್ ಆಪರೇಷನ್ ಮತ್ತು ಇತರ ಬ್ಯಾಂಕಿಂಗ್ ನಿರ್ವಹಣೆ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ಕರ್ನಾಟಕ ಬ್ಯಾಂಕ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗೆ 45 ರಿಂದ 60 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ. ಸಂದರ್ಶನ ಮತ್ತು ಗುಂಪು ಚರ್ಚೆ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ.
ಅರ್ಹ ಅಭ್ಯರ್ಥಿಗಳು
ವಿಳಾಸಕ್ಕೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ karnatakabank.com ವೆಬ್ ಸೈಟ್ ನೋಡಬಹುದಾಗಿದೆ.
ಉದ್ಯಮಿಯಾಗು ಕಾರ್ಯಕ್ರಮ; ಧಾರವಾಡ ಜಿಲ್ಲಾ ಕೈಗಾರಿಕಾ ಕೇಂದ್ರವು ಬೆಳಗಾವಿ ವಿಭಾಗ ಮಟ್ಟದ 7 ಜಿಲ್ಲೆಗಳ ಉದ್ದಿಮೆಗಳ ಅಭಿವೃದ್ದಿಗಾಗಿ ‘ಉದ್ಯಮಿಯಾಗು ಹಾಗೂ ಉದ್ಯೋಗ ನೀಡು’ ಎಂಬ ಕಾರ್ಯಗಾರವನ್ನು ಏಪ್ರಿಲ್ 8ರಂದು ಆಯೋಜಿಸಿದೆ.
ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ಹುಬ್ಬಳ್ಳಿಯ ಕೆಲ್‍ಇ ಐಟಿ ಇಂಜನಿಯರಿಂಗ್ ಕಾಲೇಜು, ವಿದ್ಯಾನಗರದ ಬಿವ್ಹಿಬಿ ಇಂಜಿನಿಯರಿಂಗ್ ಕಾಲೇಜು, ಧಾರವಾಡದ ಎಸ್.ಡಿ.ಎಂ ಇಂಜನಿಯರಿಂಗ್ ಕಾಲೇಜುಗಳಲ್ಲಿಯೂ ವರ್ಚುವಲ್ ವೇದಿಕೆಯ ಮೂಲಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಗಾರದಲ್ಲಿ ಕೈಗಾರಿಕೆ ಸ್ಥಾಪನೆಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳು, ಮೂಲಭೂತ ಸೌಕರ್ಯಗಳು ಹಾಗೂ ಹಣಕಾಸು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುವುದು.
ಯಶಸ್ವಿ ಯುವ ಉದ್ದಿಮೆದಾರರಿಂದ ಅವರ ಯಶೋಗಾಥೆ ಬಗ್ಗೆ ಮಾಹಿತಿ ನೀಡಲಾಗುವುದು. ವರ್ಚುಯಲ್ ಕಾರ್ಯಕ್ರಮದಲ್ಲಿ ಭಾಗವಹಿಸಲು ವೆಬ್‍ಸೈಟ್ https://ebiz.karnataka.gov.in ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ.
ಆಸಕ್ತ ಭಾವಿ ಉದ್ದಿಮೆದಾರರು ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕೆಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ಸಿದ್ದಣ್ಣ ಮನವಿ ಮಾಡಿದ್ದಾರೆ.
ತರಬೇತಿಗೆ ಅರ್ಜಿ ಆಹ್ವಾನ; ತೋಟಗಾರಿಕೆ ಇಲಾಖೆಯಿಂದ ಕಲಬುರಗಿ ಜಿಲ್ಲೆಯ ರೈತರ ಮಕ್ಕಳಿಗಾಗಿ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 2022-23ನೇ ಸಾಲಿನಲ್ಲಿ ಹತ್ತು ತಿಂಗಳ ಅವಧಿಗೆ ತೋಟಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿಯಲ್ಲಿ ಪಾಲ್ಗೊಳ್ಳುವವರು ಅರ್ಜಿ ಸಲ್ಲಿಸಬೇಕು. ಈ ತೋಟಗಾರಿಕೆ ತರಬೇತಿಯು ಮೇ 2ರಿಂದ ಪ್ರಾರಂಭವಾಗುತ್ತಿದೆ. ತರಬೇತಿ ಪಡೆಯಲಿಚ್ಛಿಸುವ ಅಭ್ಯರ್ಥಿಗಳು ಕನಿಷ್ಠ ಎಸ್. ಎಸ್. ಎಲ್. ಸಿ. ಕನ್ನಡ ವಿಷಯದೊಂದಿಗೆ ಪಾಸಾಗಿರಬೇಕು ಹಾಗೂ ದೃಢಕಾಯವಾಗಿರಬೇಕು.
ಅಭ್ಯರ್ಥಿಗಳ (ಮಾಜಿ ಸೈನಿಕರು ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳು) ತಂದೆ/ ತಾಯಿ/ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕಲ್ಲದೆ ಹಾಗೂ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ಕಡ್ಡಾಯವಾಗಿ ನೀಡಬೇಕು.
ನಿಗದಿತ ಅರ್ಜಿ ನಮೂನೆಗಳನ್ನು ಕಲಬುರಗಿ ತೋಟಗಾರಿಕೆ ಉಪ ನಿರ್ದೇಶಕರು (ಜಿಪಂ)/ ರಾಜ್ಯ ವಲಯದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಯಿಂದ, ಆಯಾ ತಾಲೂಕಿನ ತೋಟಗಾರಿಕೆ ಕಚೇರಿಯಿಂದ ಅಥವಾ ಇಲಾಖೆಯ https://horticulturedir.karnataka.gov.in ವೆಬ್‍ಸೈಟ್ ಮೂಲಕ ಪಡೆದು ಏಪ್ರಿಲ್ 16ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು.
ಅರ್ಜಿಗಳನ್ನು ಕಲಬುರಗಿ (ರಾಜ್ಯ ವಲಯ) ಉಪನಿರ್ದೇಶಕರು, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಏಪ್ರಿಲ್ 18ರಂದು ಬೆಳಗ್ಗೆ 10 ಗಂಟೆಗೆ ತಮ್ಮ ಮೂಲ ದಾಖಲಾತಿಗಳೊಂದಿಗೆ ಕಲಬುರಗಿಯ ಐವಾನ್ ಶಾಹಿ ರಸ್ತೆಯ ತೊಟಗಾರಿಕೆ ಉಪ ನಿರ್ದೇಶಕರು (ಜಿ.ಪಂ.) ಕಚೇರಿಗೆ ಸಂದರ್ಶನಕ್ಕೆ ಹಾಜರಾಗಬೇಕು