ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೆ.ಎಸ್‌ಈಶ್ವರಪ್ಪ ರಾಜೀನಾಮೆ ನೀಡಿದರಷ್ಟೇ ಸಾಲದು ಅವರನ್ನು ಕೂಡಲೇ ಬಂಧಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಒತ್ತಾಯಿಸಿದೆ.
ಸುದ್ದಿಗೋಷ್ಠಿಯಲ್ಲಿಂದು ಈ ಆಗ್ರಹ ಮಾಡಿದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ರಾಜ್ಯದಲ್ಲಿ ನಾನಾ ರೀತಿಯಲ್ಲಿ ಹಿಂದೂ ಕಾರ್ಯಕರ್ತರ ಬಲಿಯಾಗುತ್ತಿದೆ ಹಿಂದುತ್ವದ ಹೆಸರು ಹೇಳಿ ಅಧಿಕಾರಕ್ಕೆ ಬಂದವರಿಗೆ ಹಿಂದು ಕಾರ್ಯಕರ್ತರನ್ನು ಬಳಸಿಕೊಂಡು ಅಧಿಕಾರ ಪಡೆಯಲು ಮಾತ್ರ ಗೊತ್ತಿದೆ ಹೊರತು ಹಿಂದುಗಳಿಗಾಗಿ ಏನನ್ನೂ ಮಾಡಿಲ್ಲ ಎಂದು ದೂರಿದರು .
ಲಂಚ ಮಂಚ ಮತ್ತು ಹಿಂದೂ ವಿರೋಧಿ ನೀತಿಗಳು ಮಾತ್ರ ಬಿಜೆಪಿ ಅಜೆಂಡಾ ಆಗಿದೆ ಯಾವ ಉದ್ದೇಶಕ್ಕಾಗಿ ಅಧಿಕಾರಕ್ಕೆ ಬಂದಿದ್ದರೂ ಅದು ಸಕಾರ ಆಗುತ್ತಿಲ್ಲ . ಈಶ್ವರಪ್ಪ ರಾಜೀನಾಮೆ ಒತ್ತಾಯದ ಮೇಲಾಗಿದ್ದು ಇದು ಚುನಾವಣೆಯ ಹಿನ್ನೆಲೆಯಲ್ಲಿ ಬೂಟಾಟಿಕೆಯ ಕುತಂತ್ರ ಮಾತ್ರ ಎಂದು ಟೀಕಿಸಿದರು.ಹಿಜಾಬ್ ಪ್ರಕರಣದಲ್ಲಿ 6ವಿದ್ಯಾರ್ಥಿನಿಯರನ್ನು ನಿಯಂತ್ರಿಸಲು ಆಗದವರು ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಸೂಕ್ತ ತನಿಖೆ ಮಾಡುತ್ತಾರೆಂಬ ನಂಬಿಕೆ ಇಲ್ಲ.
ಬಿಜೆಪಿ ಕಾರ್ಯಕರ್ತರಾಗಿದ್ದ ವಿನಾಯಕ್ ಬಾಳಿಗ ಕೊಲೆ ಗೆ ಇನ್ನೂ ನ್ಯಾಯ ಸಿಕ್ಕಿಲ್ಲ ಅವರ ಮನೆಯವರು ಇನ್ನೂ ಕಣ್ಣೀರು ಹಾಕುತ್ತಿದ್ದಾರೆ ಇದನ್ನು ಹತ್ತು ಆತ್ಮಹತ್ಯೆ ಅನ್ನಬೇಕೋ ಕೊಲೆ ಅನ್ನಬೇಕೋ ಗೊತ್ತಾಗುತ್ತಿಲ್ಲ ಈ ಬಗ್ಗೆ ಉನ್ನತಮಟ್ಟದ ತನಿಖೆ ಆಗಬೇಕೆಂದು ಅವರು ಒತ್ತಾಯಿಸಿದರು