ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯಿಂದ ಮೇ 4 ರಂದು ಮೈಸೂರಿನ ಜೆ.ಕೆ ಮೈದಾನದಲ್ಲಿ ಹಿಂದುಳಿದ ವರ್ಗಗಳು ಹಾಗೂ ಶೋಷಿತ ಸಮುದಾಯಗಳ ಐಕ್ಯತಾ ಸಮಾವೇಶ ಆಯೋಜನೆ ಮಾಡಲಾಗಿದೆ.
ಈ ಸಂಬಂಧ ಇಂದು ನಗರದ ಜಲದರ್ಶಿನಿಯಲ್ಲಿ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಹಾಗೂ ಹಿಂದುಳಿದ ವರ್ಗಗಳ ವೇದಿಕೆ ರಾಜ್ಯಾಧ್ಯಕ್ಷ ಶಿವರಾಮ್ ಐಕ್ಯತಾ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್, ಹಿಂದುಳಿದ ವರ್ಗಗಳ ಸ್ಥಳೀಯ ರಾಜಕೀಯ ಮೀಸಲಾತಿ ರಕ್ಷಣೆ ಆಗಬೇಕಿದೆ. ರಾಜಕೀಯ ಮೀಸಲಾತಿ ಉಳಿವಿಗಾಗಿ ಸಮಾವೇಶ ನಡೆಸುತ್ತಿದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ಹಿಂದುಳಿದ ವರ್ಗಗಳು ಹಾಗೂ ಶೋಷಿತ ಸಮಾಜದ 10 ಸಾವಿರ ಜನರು ಭಾಗಿಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.