ದೇಶದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ರಾಜ್ಯದಲ್ಲೂ ಕಾಂಗ್ರೆಸ್ ಪಕ್ಷವನ್ನ ಮನೆಗೆ ಕಳಿಸುತ್ತೇವೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ನುಡಿದರು.
ದಾವಣಗೆರೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಜ್ಯದಲ್ಲಿ ಕೆಲವರು ಸಾಮರಸ್ಯ ಕದಡಲು ಪ್ರಯತ್ನಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸಾಮರಸ್ಯ ಕದಡಲು ಯತ್ನಿಸಲಾಗುತ್ತಿದೆ. ಅಮಾಯಕರನ್ನ ಬಂಧಿಸಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಸಿದ್ದರಾಮಯ್ಯ ಹುಬ್ಬಳಿಗೆ ತೆರಳಿ ವಾಸ್ತವ ಸ್ಥಿತಿ ನೋಡಲಿ ಎಂದು ಕಿಡಿಕಾರಿದರು.
ಗೃಹ ಸಚಿವರನ್ನ ಬದಲಾಯಿಸುವಂತೆ ಸ್ವಪಕ್ಷದವರೇ ಆಗ್ರಹ ಹಿನ್ನೆಲೆ ಈ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ಗೃಹ ಸಚಿವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಗೃಹ ಸಚಿವರನ್ನ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಇನ್ನು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಈಶ್ವರಪ್ಪ ಯಾವುದೇ ತಪ್ಪು ಮಾಡಿಲ್ಲ. ಈಶ್ವರಪ್ಪ ಅವರು ಆರೋಪ ಮುಕ್ತರಾಗಿ ಮತ್ತೆ ಸಚಿವರಾಗಲಿದ್ದಾರೆ ಎಂದರು.