ಬೆಂಗಳೂರು: ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನೇ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸುತ್ತಿರುವ ಸಚಿವ ಸುನೀಲ್ ಕುಮಾರ್ ವಿರುದ್ಥ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಖರ್ಗೆಯವರ ಬೆನ್ನ ಹಿಂದೆ ಕಾಂಗ್ರೆಸ್ ಪಕ್ಷ ಇದೆ. ಸುನಿಲ್ ಕುಮಾರ್ ನೀಡಿದ ಹೇಳಿಕೆಯ ಬೆನ್ನಲ್ಲೇ ಸಿಐಡಿ ಪೊಲೀಸರು ಪ್ರಿಯಾಂಕ್ ಖರ್ಗೆ ಅವರ ವಿಚಾರಣೆಗೆ ನೋಟಿಸ್ ನೀಡಿರುವುದನ್ನು ನೋಡಿದರೆ, ಬಿಜೆಪಿ ನಾಯಕರು ಹಗರಣದ ಬಗ್ಗೆ ಮಾತನಾಡುವವರ ಬಾಯಿಮುಚ್ಚಿಸುವ ಹುನ್ನಾರ ನಡೆಸುತ್ತಿರುವಂತೆ ಕಾಣುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಇನ್ನು ಅಡಿಯಿಂದ ಮುಡಿವರೆಗೆ 100% ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ರಾಜ್ಯದ ಬಿಜೆಪಿ ಸರ್ಕಾರವನ್ನು ಸುಳ್ಳುಗಳ ಬಣ್ಣಹೊಡೆದು ಅಳಿಸಲಾಗದು. ಸರ್ಕಾರ, ತನಿಖಾ ಸಂಸ್ಥೆಗಳು ನಿಮ್ಮ ನಿಯಂತ್ರಣದಲ್ಲಿರಬಹುದು ಆದರೆ ರಾಜ್ಯದ ಜನತೆ ನಮ್ಮ ಜೊತೆ ಇದ್ದಾರೆ ಎಂದು ಬಿಜೆಪಿ ಸರ್ಕಾರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.