ಹಿಜಾಬ್ ತೀರ್ಪಿನ ವಿರುದ್ಧ ಮೇಲ್ಮನವಿ: ಅರ್ಜಿಗಳ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ

ನವದೆಹಲಿ: ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧದ ಮೇಲ್ಮನವಿಗಳನ್ನು ಶೀಘ್ರದಲ್ಲಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿರುವ ಮೇಲ್ಮನವಿ ಕುರಿತು ಹಿರಿಯ ವಕೀಲರಾದ ಮೀನಾಕ್ಷಿ ಅರೋರಾ ಮಂಗಳವಾರ ಸಿಜೆಐ ಪೀಠದ ಮುಂದೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು, ದಯವಿಟ್ಟು ಎರಡು ದಿನ ಕಾಯಿರಿ. ನಾನು ಪಟ್ಟಿ ಮಾಡುತ್ತೇನೆ ಎಂದು ಮೀನಾಕ್ಷಿ ಅರೋರಾ ಅವರಿಗೆ ತಿಳಿಸಿದ್ದಾರೆ. ಅವರು ವಿದ್ಯಾರ್ಥಿಗಳ ಪರವಾಗಿ ಪ್ರಕರಣದ ಆರಂಭಿಕ ವಿಚಾರಣೆಗೆ ಮೌಖಿಕವಾಗಿ ಪ್ರಸ್ತಾಪಿಸಿದರು.

ಹಿಜಬ್ ಇಸ್ಲಾಂ ಧಾರ್ಮಿಕ ಆಚರಣೆಯ ಅಗತ್ಯ ಭಾಗವಲ್ಲ. ಶಾಲಾ-ಕಾಲೇಜುಗಳ ಸಮವಸ್ತ್ರದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದಾರೆ.

Discover more from Valmiki Mithra

Subscribe now to keep reading and get access to the full archive.

Continue reading