ಬೆಳಗಾವಿ: ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿಯ ಜಿಲ್ಲಾ ಮಟ್ಟದ ಸಭೆ ಬೆಳಗಾವಿಯಲ್ಲಿ ಆಯೋಜಿಸಲಾಗಿತ್ತು.
ಕೆಪಿಸಿಸಿ ಕಾರ್ಯಧ್ಯಕ್ಷರಾದ ಸತೀಶ್ ಜಾರಕಿಹೊಳಿಯವರ ಸುಪುತ್ರರಾದ ಯುವ ನಾಯಕ ಚಿ. ರಾಹುಲ್ ಜಾರಕಿಹೊಳಿಯವರ ನೇತೃತ್ವದಲ್ಲಿ ಬೆಳಗಾವಿಯಲ್ಲಿ ನಡೆದ ಎಸ್ಸಿಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹರಿಹರ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಬೆಂಗಳೂರಿನ ಪ್ರಿಡಂ ಪಾರ್ಕನಲ್ಲಿ ಇವತ್ತಿಗೆ 76ನೇ ದಿನವಾಯ್ತು ಆದ್ದರಿಂದ ಇವತ್ತು ಸರ್ಕಾದಿಂದ ಸಮಾಜಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಹೊರಡಲು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಮಟ್ಟದ ಸಭೆಯನ್ನುಉದ್ಘಾಟಿಸಿ ಮಾತನಾಡಿದರು.
ಇದೇ ವೇಳೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಶ್ರೀ ರಾಜಶೇಖರ ತಳವಾರ, ಕ್ರಿಯಾ ಸಮಿತಿಯ ಸಂಚಾಲಕರಾದ ಶ್ರೀ ಹರ್ತಿಕೋಟೆ ವೀರೆಂದ್ರಸಿಂಹ, ವಾಲ್ಮೀಕಿ ಸಮಾಜ ಯುವ ಮುಖಂಡರಾದ ಶ್ರೀ ಪ್ರತಾಪ ಮದಕರಿ, ಯುವ ಘಟಕದ ರಾಜ್ಯ ಅಧ್ಯಕ್ಷರಾದ ಶ್ರೀ ಟಿ ಆರ್ ತುಳಸಿರಾಮ್, ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ಟಿ ಅಧ್ಯಕ್ಷರಾದ ಶ್ರೀ ಬಾಳೇಶ್ ದಾಸನಟ್ಟಿ ಹಾಗೂ ಚಿಕ್ಕೋಡಿ ತಾಲ್ಲೂಕ ಅಧ್ಯಕ್ಷರಾದ ಶ್ರೀ ಪರಸು ನಾಯಿಕ ಮುಂತಾದ ವಾಲ್ಮೀಕಿ ಸಮಾಜದ ನಾಯಕರು ಉಪಸ್ಥಿತರಿದ್ದರು.