ಕರ್ನಾಟಕ ವಿಶ್ವವಿದ್ಯಾಲಯ ಸಹಾಯಕ ಉಪನ್ಯಾಸಕರು ಹಾಗೂ ಅತಿಥಿ ಉಪನ್ಯಾಸಕರ ಸಂಘ (ರಿ) ಪರವಾಗಿ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸುವಂತೆ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ ಹೊರಟ್ಟಿ ಅವರಿಗೆ ಸಂಘದ ಉಪಾಧ್ಯಕ್ಷರು ಡಾ.ವಿಶ್ವನಾಥ ವೈ. ಚಿಂತಾಮಣಿ, ಡಾ.ಮಹೇಂದ್ರ ಹರಿಹರ ಮನವಿ ಸಲ್ಲಿಸಿದರು.
ಕವಿವಿ ಸುವರ್ಣ ಮಹೋತ್ಸವ ಸಭಾ ಭವನದಲ್ಲಿ ಬುಧವಾರ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಮನವಿ ಸಲ್ಲಿಸುವ ಜೊತೆಗೆ, ಖಾಯಂ ನೇಮಕಾತಿ, ವೇತನ ಹೆಚ್ಚಳ, ಪದನಾಮ ಬದಲಾವಣೆ, ಗುರುತಿನ ಚೀಟಿ ವಿತರಣೆ ಹೀಗೆ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.