ತುಮಕೂರು: ಜಿಲ್ಲೆಯಲ್ಲಿ ಬೆಳ್ಳಂಬೆಳಿಗ್ಗೆ ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ತುರುವೇಕೆರೆ ತಾಲೂಕಿನ ದೊಡ್ಡಶೆಟ್ಟಿಕೆರೆ ಬಳಿ ಕ್ಯಾಂಟರ್ ಲಾರಿ ಹಾಗೂ ಇನೋವಾ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಕಾರು ಚಾಲಕ ಸೇರಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಬೆಳ್ಳೂರು ಕ್ರಾಸ್ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.