ಬೆಂಗಳೂರು: ಕೇವಲ ಪಿಎಸ್ಐ ನೇಮಕಾತಿಯ ಅಕ್ರಮವಷ್ಟೇ ಅಲ್ಲ, ಎಲ್ಲಾ ನೇಮಕಾತಿಗಳಲ್ಲೂ ಅಕ್ರಮವಾಗಿದೆ ಎಂದು ಈಶ್ವರ್ ಖಂಡ್ರೆ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಶಿಕ್ಷಕರು, ಉಪನ್ಯಾಸಕರ ನೇಮಕಾತಿಯಲ್ಲೂ ಅಕ್ರಮ ನಡೆದಿದೆ. ಹೀಗಾಗಿ ಹೈಕೋರ್ಟ್ ನ್ಯಾಯಾಧೀಶರ ನಿಗಾದಲ್ಲಿ ಈ ಪ್ರಕರಣಗಳ ತನಿಖೆ ನಡೆಯಬೇಕು. ತಪ್ಪಿತಸ್ಥರ ಮೇಲೆ ಕ್ರಮವಾಗಬೇಕು. ಯಾರೇ ಇರಲಿ ತಪ್ಪಿತಸ್ಥರ ಮೇಲೆ ಕ್ರಮವಾಗಬೇಕು ಎಂದು ಆಗ್ರಹಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜೊತೆ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಫೋಟೋ ವೈರಲ್ ಆಗಿರು ಬಗ್ಗೆ ಮಾತನಾಡಿದ ಈಶ್ವರ್ ಖಂಡ್ರೆ, ದೊಡ್ಡವರೆಂದ ಮೇಲೆ ಹಲವಾರು ಜನ ಬರುತ್ತಾರೆ. ಹಾಗಂತ ಶಿವಕುಮಾರ್ ಹಾಗಂತ ಅಕ್ರಮ ಮಾಡಿ ಅಂತ ಹೇಳುತ್ತಾರಾ ಎಂದರು.