ತುಮಕೂರು: ಸ್ವಾಮೀಜಿಗಳ ತಂಡ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಗುರುವಾರ ಭೇಟಿ ಮಾಡಿದ್ದಾರೆ.
ತುಮಕೂರಿನ ಬೆಳ್ಳಾವಿಯ ಕಾರದ ಮಠದ ಶ್ರೀವೀರಬಸವ ಸ್ವಾಮೀಜಿ, ತಿಪಟೂರಿನ ಷಡಕ್ಷರಿ ಮಠದ ರುದ್ರಮುನಿ ಶಿವಾಚಾರ್ಯ ಶ್ರೀ, ಕಾಶಿ ಅನ್ನಪೂರ್ಣೇಶ್ವರಿ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ತಂಗನಹಳ್ಳಿ ಮಠದ ಶ್ರೀಗಳು ಸೇರಿದಂತೆ ಹಲವರು ಶ್ರೀಗಳು ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದಾರೆ.
ಇದೇ ವೇಳೆ ಬೆಳ್ಳಾವಿ ಕಾರದ ಮಠಕ್ಕೆ ಬರುವಂತೆ ಆಹ್ವಾನ ನೀಡಿದ್ದ, ಮುಂದಿನ ದಿನಗಳಲ್ಲಿ ಯೋಗಿ ಆದಿತ್ಯನಾಥ್ ತುಮಕೂರಿಗೆ ಭೇಟಿ ನೀಡುವ ಭರವಸೆ ನೀಡಿದ್ದಾರೆ.