ಕಲಬುರಗಿ: ರಾಜ್ಯಾದ್ಯಂತ ಸಂಚಲನ ಮೂಡಿಸಿದ ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ತಲೆ ಮರೆಸಿಕೊಂಡಿದ್ದ ದಿವ್ಯಾ ಹಾಗರಗಿ ಸುಮಾರು 18 ದಿನಗಳ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ನೇತೃತ್ವದ ತಂಡವು ದಿವ್ಯಾ ಹಾಗರಗಿ ಅನ್ನು ಬಂಧಿಸಿದ್ದು, ಶುಕ್ರವಾರ 12 ಗಂಟೆ ಸುಮಾರಿಗೆ ಪುಣೆಯಿಂದ ಕಲಬುರಗಿಗೆ ಅವರನ್ನು ಕರೆದುಕೊಂಡು ಬರಲಾಗುವುದು ಎಂದು ಸಿಐಡಿ ಪೊಲೀಸ್ ಮೂಲಗಳು ತಿಳಿಸಿವೆ.
ದಿವ್ಯಾ ಹಾಗರಗಿ 18 ದಿನಗಳಿಂದ ತಲೆ ಮರೆಸಿಕೊಂಡದ್ದರು. ಈಕೆಯನ್ನು ಪುಣೆಯಲ್ಲಿ ಬಂಧಿಸಿರುವ ಸಿಐಡಿ ಅಧಿಕಾರಿಗಳು ಮೊದಲು ಕಲಬುರ್ಗಿಗೆ ಕರೆತರಲಿದ್ದಾರೆ. ಈಗಾಗಲೇ ಕಲ್ಬುರ್ಗಿಯ ನ್ಯಾಯಾಲಯವು ದಿವ್ಯಾ ಹಾಗರಗಿ ಸೇರಿದಂತೆ ಇತರರ ಬಂಧನಕ್ಕೆ ಅರೆಸ್ಟ್ ವಾರೆಂಟ್ ನೀಡಿದೆ. ಇದೀಗ ದಿವ್ಯಾ ಅರೆಸ್ಟ್ ಆಗಿರುವ ಹಿನ್ನೆಲೆಯಲ್ಲಿ ದಿವ್ಯಾರನ್ನು ಕಲ್ಬುರ್ಗಿ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಸಿಐಡಿ ಅಧಿಕಾರಿಗಳು.