ಬೆಂಗಳೂರು: ಈ ಬಾರಿ ನಡೆದಿದ್ದ ಪಿಎಸ್ಐ ಪರೀಕ್ಷೆಯನ್ನು ಸರ್ಕಾರ ರದ್ದುಗೊಳಿಸಿರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಆರಗ ಜ್ಞಾನೇಂದ್ರ, ಪಿಎಸ್ಐ ಪರೀಕ್ಷೆಯಲ್ಲಿ ಒಂದಕ್ಕಿಂತ ಹೆಚ್ಚು ಸೆಂಟರ್ನಲ್ಲಿ ಅವ್ಯವಹಾರ ನಡೆದಿರುವುದು ಮನದಟ್ಟಾಗಿದೆ. ಬೆಂಗಳೂರಿನ ಸೆಂಟರ್ನಲ್ಲೂ ಅಕ್ರಮ ನಡೆದಿದೆ. ಹೀಗಾಗಿ ಈ ಹಿಂದೆ 54289 ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಅವರಿಗೆ ಇನ್ನೊಮ್ಮೆ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ಅಪಾಧಿತರನ್ನು ಹೊರತುಪಡಿಸಿ ಉಳಿದವರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.