ತುಮಕೂರು: ಗುಪ್ತಚರ ವಿಭಾಗದಲ್ಲಿ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಕುಮಾರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ತುಮಕೂರಿನಲ್ಲಿ ಕಳೆದ ಒಂದೂವರೆ ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದರು. ಶಿವಕುಮಾರ್ ಎಸ್ಪಿ ಕಚೇರಿ ಹಿಂಭಾಗದ ಪೊಲೀಸ್ ಕ್ವಾಟ್ರಸ್ನಲ್ಲಿ ವಾಸವಾಗಿದ್ದರು.ದಾವಣಗೆರೆ ಜಿಲ್ಲೆ ಜಗಳೂರು ಮೂಲದವರಾಗಿರುವ ಶಿವಕುಮಾರ್, 1994ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದರು.