ಮೈಸೂರು: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಹಿನ್ನೆಲೆಯಲ್ಲಿ ಈ ಹಿಂದೆ ನಡೆದಿದ್ದ ಪಿಎಸ್ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. ಜೊತೆಗೆ ಹೊಸದಾಗಿ ಪರೀಕ್ಷೆ ನಡೆಸುವ ನಿರ್ಧಾರವನ್ನು ಕೈಗೊಂಡಿದೆ. ಇದಕ್ಕೆ ಈಗಾಗಲೇ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದ ಅಭ್ಯರ್ಥಿಗಳಿಂದ ಸಾಕಷ್ಟು ವಿರೋಧ ಕೇಳಿಬರುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದರು.
ಯಾರು ಪ್ರಾಮಾಣಿಕವಾಗಿ ಬರೆದಿದ್ದಾರೋ, ದುಡ್ಡು ಕೊಟ್ಟು ಬರೆದಿದ್ದಾರೋ ಗೊತ್ತಿಲ್ಲ. ಅದು ತನಿಖೆಯಲ್ಲಿ ಗೊತ್ತಾಗುತ್ತೆ. ಮತ್ತೆ ಪರೀಕ್ಷೆ ಬರೆಯೋಕೆ ಎಲ್ಲರ ಬಳಿಯೂ ಫೀಜ್ ತಗೋಬಾರದು. ಯಾರ್ಯಾರು ಪರೀಕ್ಷೆ ತೆಗೆದುಕೊಂಡಿದ್ದರೋ ಅವರಿಗೆ ಪರೀಕ್ಷೆ ಬರೆಯೋಕೆ ಅವಕಾಶ ಕೊಡಬೇಕು ಎಂದು ಸಿದ್ದರಾಮಯ್ಯ ಹೇಳಿದರು.