ಬೆಂಗಳೂರು: ಹುಬ್ಬಳ್ಳಿಯಲ್ಲಿ ಯಾರೇ ಆಹಾರ ಕಿಟ್ ವಿತರಿಸಿದ್ದರೂ ಅದು ಅವರ ವೈಯಕ್ತಿಕ ವಿಚಾರ. ಅದಕ್ಕೂ ಕಾಂಗ್ರೆಸ್ಗೂ ಸಂಬಂಧವಿಲ್ಲ , ಕಾಂಗ್ರೆಸ್ ಪಕ್ಷ ಸಂವಿಧಾನ, ಕಾನೂನಿಗೆ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಹುಬ್ಬಳ್ಳಿ ಗಲಭೆಯಲ್ಲಿ ಬಿಜೆಪಿ, ಪಿಎಫ್ಐ ಷಡ್ಯಂತ್ರವಿದೆ. ಸಮಾಜದ ಶಾಂತಿ ಕೆಡಿಸುತ್ತಿರುವ ವಿಹೆಚ್ಪಿ, ಭಜರಂಗದಳ, ಎಸ್ಡಿಪಿಐನಂತಹ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ತಿಳಿಸಿದ್ದಾರೆ.