ವಿಜಯಪುರ: ವಿಜಯಪುರದ ಬಿಜೆಪಿ ನಾಯಕರೊಬ್ಬರು ತಮ್ಮ ಸರ್ಕಾರದದ ವಿರುದ್ಧವೇ ಪ್ರಧಾನಿ ಕಾರ್ಯಾಲಯಕ್ಕೆ ದೂರು ನೀಡಿದ್ದಾರೆ. ರಾಜ್ಯ ಸರ್ಕಾರ ಭ್ರಷ್ಟ ಸರ್ಕಾರವಾಗಿದ್ದು, ಪೊಲೀಸ್ ಇಲಾಖೆ ಅಲ್ಲದೆ ಬೇರೆ ಇಲಾಖೆಯಲ್ಲೂ ಅಕ್ರಮ ನಡೆದಿದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಪರಮಾತ್ಮ ರಾಘವ್ ಅಣ್ಣಿಗೇರಿ ಪ್ರಧಾನಿ ಮೋದಿಗೆ ಮಾಡಿದ್ದಾರೆ.
ರಾಜ್ಯದಲ್ಲಿ ಭ್ರಷ್ಟ ಸರ್ಕಾರವಿದ್ದು, ಜನರು ರೋಸಿ ಹೋಗಿದ್ದಾರೆ. ಪೊಲೀಸ್ ಇಲಾಖೆ ಮಾತ್ರವಲ್ಲದೆ ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಹಲವು ದೂರುಗಳು ಕೇಳಿಬಂದಿವೆ. ಹೀಗಾಗಿ ಇವುಗಳ ಬಗ್ಗೆಯೂ ತನಿಖೆ ಮಾಡಬೇಕು. ಸಿಐಡಿ ತನಿಖೆಯಿಂದ ಪ್ರಕರಣದ ಪ್ರಮುಖ ಆರೋಪಿಯನ್ನು ಹಿಡಿಯಲು ಸಾಧ್ಯವಿಲ್ಲ. ಹೀಗಾಗಿ ಸಿಬಿಐಗೆ ನೀಡಿ ಎಂದು ಆನ್ಲೈನ್ ಮೂಲಕ ದಾಖಲಿಸಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.