ಮೈಸೂರು: ಕೇವಲ ಮುಸ್ಲಿಮರನ್ನೇ ಯಾಕೆ ಟಾರ್ಗೆಟ್ ಮಾಡ್ತೀರಾ? ಬೇರೆ ಜಾತಿ, ಧರ್ಮದವರು ಮಟನ್ ಸ್ಟಾಲ್ ತೆರೆದಿಲ್ವಾ? ಹಿಂದೂಗಳು, ಬೇರೆ ಜಾತಿಯವರ ಅಂಗಡಿ ಮೇಲೆ ಯಾಕೆ ಕ್ರಮ ಕೈಗೊಳ್ಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಸ್ಲಿಂ ಮಟನ್ ಸ್ಟಾಲ್, ಕಸಾಯಿಖಾನೆ ಮುಚ್ಚಲು ನೋಟಿಸ್ ವಿಚಾರವಾಗಿ ಮಾತನಾಡಿದ ಅವರು, ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ. ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಿದ್ದರೆ ಮಾಡಿ. ಕಾನೂನು ಎಲ್ಲರಿಗೂ ಒಂದೇ. ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನು ಟಾರ್ಗೆಟ್ ಮಾಡಬೇಡಿ. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಯಾರೇ ತಪ್ಪು ಮಾಡಿದ್ರೂ ಕ್ರಮ ತೆಗೆದುಕೊಳ್ಳಿ. ಒಂದು ವರ್ಗವನ್ನು ಟಾರ್ಗೆಟ್ ಮಾಡಿದರೆ ಮತ ಧ್ರುವೀಕರಣವಾಗುತ್ತೆ ಎಂಬ ಭ್ರಮೆಯಲ್ಲಿ ಬಿಜೆಪಿಯಿದೆ. ಅದು ಅಸಾಧ್ಯ, ಅವರಿಗೆ ತಿರುಗುಬಾಣವಾಗಲಿದೆ ಎಂದರು.