ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುವ ನಾಯಕರು ಯಾರಾದರೂ ಇದ್ದರೆ ಅದು ಕುಮಾರಸ್ವಾಮಿ ಮಾತ್ರ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮನವಿ ಮಾಡಿದರು.
ಅವರು ಯಾವಾಗಲೂ ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ರೈತರ ಸಾಲ ಮನ್ನಾ ಮಾಡಿದ ವಿಚಾರವೇ ಇದಕ್ಕೆ ಸಾಕ್ಷಿ. ರೈತರ ಸಾಲದ ಹೊರೆ ಇಳಿಸುತ್ತೇನೆ ಅಂತ ಹೇಳಿದ್ದರು, ಅದೇ ರೀತಿ ಮಾಡಿದರು ಎಂದರು.
ಹಾಗಾಗಿ ಮುಂದೆ ಎಲ್ಲರೂ ಸೇರಿ ಕುಮಾರಸ್ವಾಮಿಯವರಿಗೆ ಬೆಂಬಲ ಕೊಡಬೇಕು ಎಂದು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನಸವಾಡಿಯಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ರಾಜ್ಯದಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂದು ನಿಮಗೆ ಗೊತ್ತಿದೆ ಎಂದರು.