ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕಿನ ಬೂದನಹಳ್ಳಿಯಲ್ಲಿ ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಲಕ್ಷ್ಮಮ್ಮ ಮೃತ ದುರ್ದೈವಿ. ಲಕ್ಷ್ಮಮ್ಮ ಮಳೆ ಬರುವ ಸಂದರ್ಭದಲ್ಲಿ ಮರದ ಕೆಳಗೆ ಕುಳಿತ್ತಿದ್ದರು. ಈ ವೇಳೆ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಕುಣಿಗಲ್ ಶಾಸಕ ಡಾ.ರಂಗನಾಥ್ ಭೇಟಿ ನೀಡಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.