ನವದೆಹಲಿ: ಕೋವಿಡ್ ಸಾಂಕ್ರಾಮಿಕ ರೋಗದಿಂದಾಗಿ 47 ಲಕ್ಷ ಭಾರತೀಯರು ಸಾವನ್ನಪ್ಪಿದ್ದಾರೆ. ಭಾರತ ಸರ್ಕಾರ ಹೇಳಿರುವಂತೆ ಅದು 4.8 ಲಕ್ಷ ಅಲ್ಲ. ವಿಜ್ಞಾನ ಸುಳ್ಳು ಹೇಳುವುದಿಲ್ಲ. ಮೋದಿ ಸುಳ್ಳು ಹೇಳುತ್ತಾರೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳನ್ನು ಗೌರವಿಸಿ. ಕಡ್ಡಾಯ 4 ಲಕ್ಷ ರೂಪಾಯಿ ಪರಿಹಾರವನ್ನು ಕೊಟ್ಟು ಅವರ ನೆರವಿಗೆ ಧಾವಿಸಿ” ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಕೋವಿಡ್-19 ನಿಂದ ನೇರವಾಗಿ ಅಥವಾ ಆರೋಗ್ಯ ವ್ಯವಸ್ಥೆಗಳು ಮತ್ತು ಸಮಾಜದ ಮೇಲೆ ಸಾಂಕ್ರಾಮಿಕದ ಪ್ರಭಾವದಿಂದಾಗಿ 14.9 ಮಿಲಿಯನ್ ಜನರು ಸಾವನ್ನಪ್ಪಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಗುರುವಾರ ಹೇಳಿದೆ.
ವಿಶ್ವ ಆರೋಗ್ಯ ಸಂಸ್ಥೆಯ ಅಂಕಿಅಂಶಗಳ ಪ್ರಕಾರ ಭಾರತದಲ್ಲಿ 4.7 ಮಿಲಿಯನ್ ಕೋವಿಡ್ ಸಾವುಗಳು ಸಂಭವಿಸಿವೆ. ಇದು ಅಧಿಕೃತ ಅಂಕಿಅಂಶಗಳ 10 ಪಟ್ಟು ಮತ್ತು ಜಾಗತಿಕವಾಗಿ ಕೋವಿಡ್ ಸಾವುಗಳಲ್ಲಿ ಮೂರನೇ ಒಂದು ಭಾಗವಾಗಿದೆ ಎಂದು ಅದು ಹೇಳಿದೆ.