ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಮೋಹನ್ ಜುನೇಜ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಹೆಸರಘಟ್ಟ ಮುಖ್ಯರಸ್ತೆಯಲ್ಲಿರುವ ಸಪ್ತಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿರುವ ಮೋಹನ್ ಜುನೇಜ ಅವರು, ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯರಾಗಿದ್ದರು.
ಇತ್ತೀಚೆಗೆ ತೆರೆಕಂಡು ಭಾರೀ ಯಶಸ್ಸು ಗಳಿಸಿದ ಕೆಜಿಎಫ್-2 ಮತ್ತು ಕೆಜಿಎಫ್-1 ಚಿತ್ರ ಸೇರಿದಂತೆ ನವಗ್ರಹ, ಚೆಲ್ಲಾಟ, ಜೋಗಿ ಸೇರಿದಂತೆ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಸ್ಯಾಂಡಲ್ವುಡ್ನ ಪ್ರಮುಖ ನಾಯಕ ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ.