ಅಥಣಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದಿಂದ ಅಥಣಿ ಪಟ್ಟಣದಲ್ಲಿ ಬೈಕ್ ರ್ಯಾಲಿ ಮತ್ತು ಪ್ರತಿಭಟನೆ ನಡೆಸಲಾಯಿತು.
ಬೆಳಗಾವಿ ಜಿಲ್ಲೆ ಅಥಣಿ ಮಿನಿ ವಿಧಾನಸೌಧ ಮುಂದೆ ಒಂದು ದಿನದ ಮಟ್ಟಿಗೆ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ರಾಣಿ ಚೆನ್ನಮ್ಮ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮುಖಾಂತರ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರಿಂದ ಬೈಕ್ ರ್ಯಾಲಿ ಪ್ರಾರಂಭ ಮಾಡಲಾಯಿತು. ಬೈಕ್ ರ್ಯಾಲಿಯಲ್ಲಿ ನೂರಾರು ಜನರು ಭಾಗಿಯಾಗಿದ್ದರು.