ತುಮಕೂರು: ಆರ್.ಡಿ ರೊಪ್ಪ ಗ್ರಾಮದ ಪಾತಣ್ಣ ಎನ್ನುವವರು ಸುಮಾರು ಎಕರೆಯಲ್ಲಿ ಬಾಳೆ ಬೆಳೆದಿದ್ದು, ಈ ಪೈಕಿ ಒಂದು ಎಕರೆಗೂ ಅಧಿಕ ಬೆಳೆ ಮಳೆಯಿಂದ ನಾಶವಾಗಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ರೈತ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಜಿಲ್ಲೆಯಲ್ಲಿ ನಿನ್ನೆ ತಡರಾತ್ರಿ ಭಾರೀ ಮಳೆಯಾಗಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಪಾವಗಡ ತಾಲೂಕಿನ ಆರ್.ಡಿ ರೊಪ್ಪ ಗ್ರಾಮದಲ್ಲಿ ತಡರಾತ್ರಿ ಸುರಿದ ಗಾಳಿ ಮಳೆಗೆ ಬಾಳೆ ತೋಟ ಸಂಪೂರ್ಣ ನಾಶವಾಗಿದ್ದು, ರೈತರು ಕಣ್ಣೀರಿಟ್ಟಿದ್ದಾರೆ.