ಪಾವಗಡ: ರಾಜನಹಳ್ಳಿ ಶ್ರೀಗಳ ಮೀಸಲಾತಿ ಹೋರಾಟ ಬೆಂಬಲಿಸಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಸಂಘ ಸಂಸ್ಥೆಗಳ ಮುಖಂಡರು ಸಭೆ ನಡೆಸಲಾಯಿತು.
ಪಾವಗಡ. ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾಸಮಿತಿ ಪಾವಗಡ ತಾಲೂಕು ಘಟಕದ ವತಿಯಿಂದ ಪಟ್ಟಣ ಪ್ರವಾಸಿ ಮಂದಿರದ ಆವರಣದಲ್ಲಿ ತಾಲೂಕಿನ ಎಲ್ಲ ಎಸ್.ಸಿ.ಎಸ್.ಟಿ. ಸಂಘ ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು ಮುಖಂಡರು ಭಾಗವಹಿಸಿ ರಾಜನಹಳ್ಳಿ ಶ್ರೀಗಳ ನಿರಂತರ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ರೂಪಿಸಿಕೊಳ್ಳಲಾಯಿತು.
ಈ ಸಭೆಯಲ್ಲಿ ವಾಲ್ಮೀಕಿ ಮಾದಿಗ ಬೋವಿ ಚಲವಾದಿ ಲಂಬಾಣಿ ಕೊರಚ ಸಮುದಾಯದ ಮುಖಂಡರುಗಳು ಭಾಗವಹಿಸಿದ್ದರು.