ಬೆಂಗಳೂರು: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಪೊಲೀಸ್ ಮಹಾನಿರ್ದೇಶಕ ಡಾ.ಪಿ ರವೀಂದ್ರನಾಥ್‌ರವರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.
ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ ಪ್ರಕರಣ ವಿಚಾರಣೆ ನಡೆಸುತ್ತಿದ್ದೆ. ಆ ವೇಳೆ ಪತ್ರಿಕಾಗೋಷ್ಟಿಯೊಂದರಲ್ಲಿ ಇಬ್ಬರ ಪ್ರಭಾವಿಗಳ ಹೆಸರು ಬಹಿರಂಗಪಡಿಸಿದ್ದಲ್ಲದೆ ಅವರು ಡಿಸಿಆರ್‌ಇ ಅಧಿಕಾರಿಗಳ ಮುಂದೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ್ದೆ. ಅಂದಿನಿಂದ ಸರ್ಕಾರದ ಮೇಲೆ ಪ್ರಭಾವ ಬೀರುವ ವ್ಯಕ್ತಿಗಳು ನನ್ನನ್ನ ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಡಾ.ಪಿ ರವೀಂದ್ರನಾಥ್ ಆರೋಪಿಸಿದ್ದಾರೆ.
ನಿಜವಾದ ಎಸ್‌ಎಸಿ/ಎಸ್‌ಟಿ ಸಮುದಾಯದಕ್ಕೆ ನ್ಯಾಯ ದೊರಕಿಸಿಕೊಡಲು ನಾನು ಮತ್ತಷ್ಟು ಕಾಲ ಡಿಸಿಆರ್‌ಇ ನಲ್ಲಿ ಇರಬೇಕಿತ್ತು. ನಾನು ಸರ್ಕಾರದ ವಿರುದ್ಧವಿರಲಿಲ್ಲ. ನನ್ನನ್ನು ವರ್ಗಾವಣೆ ಮಾಡಿ ಎಂದು ಕೇಳಿಕೊಂಡಿರಲಿಲ್ಲ. ಈ ವರ್ಗಾವನೆ ಸಾರ್ವಜನಿಕ ಹಿತದೃಷ್ಟಿಯಿಂದ ನಡೆದುದ್ದಲ್ಲ. ಬದಲಿಗೆ ನಿಯಮಾವಳಿಗಳನ್ನು ಉಲ್ಲಂಘಿಸಿ, ಪಿತೂರಿ ನಡೆಸಿ ನನ್ನ ವರ್ಗಾವಣೆ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.
ಕೆಲದಿನಗಳಿಂದ ರಜೆಯಲ್ಲಿದ್ದ ಅವರು, ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಹೆಚ್ಚುವರಿ ಡಿಜಿಪಿ ಅರುಣ್ ಚಕ್ರವರ್ತಿಯವರಿಗೆ ಅಧಿಕಾರ ಹಸ್ತಾಂತರಿಸಿದ ನಂತರ ಇಂದು ಅರಮನೆ ರಸ್ತೆಯ ಅವರ ಕಚೇರಿಯಿಂದ ವಿಧಾನಸೌಧಕ್ಕೆ ತೆರಳಿ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ..