ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ವಾಲ್ಮೀಕಿ ಗುರುಪೀಠದ ಪ್ರಸನ್ನಾಂದಪುರಿ ಸ್ವಾಮೀಜಿ ಅವರು ಪರಿಶಿಷ್ಟ ಜಾತಿಗೆ 15% ಪರಿಶಿಷ್ಟ ಪಂಗಡಕ್ಕೆ 7.5% ಮೀಸಲಾತಿಗೆ ಆಗ್ರಹಿಸಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಬೆಂಬಲಿಸಿ ರಾಜ್ಯಾಧ್ಯಾಂತ ಕರೆನೀಡಿದ ಹೋರಾಟ ಬೆಂಬಲಿಸಿ ಜಿಲ್ಲಾ ಪಂಚಾಯತಿ ಸದಸ್ಯೆ ಶಾಂತಲಾ ರಾಜಣ್ಣ ಅವರ ನೇತೃತ್ವದಲ್ಲಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮುಖಂಡರೊಂದಿಗೆ ತುಮಕೂರಿನ ಟೌನ್ ಹಾಲ್ ಸರ್ಕಲ್ ಇಂದ ಜಿಲ್ಲಾಡಳಿತ ಕಚೇರಿ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಲಾಯಿತು , ಈ ಸಂದರ್ಭದಲ್ಲಿ ನಗರದ ಚರ್ಚ್ ಸರ್ಕಲ್ ಹಾಗೂ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ರಸ್ತೆ ತಡೆದು ಸರ್ಕಾರದ ವಿರುದ್ಧ ಪ್ರತಿಭಟಿಸಲಾಯಿತು
ಪ್ರತಿಭಟನೆಯಲ್ಲಿ ಭಾಗಿಯಾದ ಎಲ್ಲಾ ಮುಖಂಡರೊಂದಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು