ತಿ.ನರಸೀಪುರ: ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಚ್. ಕೆ. ರಾಮು ಪರ ವರುಣಾ ಕ್ಷೇತ್ರದ ನಿಕಟಪೂರ್ವ ಜೆಡಿಎಸ್ ಅಧ್ಯಕ್ಷ ತಾಯೂರು ಪ್ರಕಾಶ್ ಮತಯಾಚನೆ ಮಾಡಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರು ಮತ್ತು ಸಿಬ್ಬಂದಿ ವರ್ಗದವರನ್ನು ಜೆಡಿಎಸ್ ಪಕ್ಷದ ಎಚ್. ಕೆ. ರಾಮು ರವರಿಗೆ ಮತ ಹಾಕುವಂತೆ ಮನವಿ ಮಾಡಿದರು.
ನಂತರ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ಅಭ್ಯರ್ಥಿಯು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿದ್ದರು. ಅವರು ಸರ್ಕಾರಿ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ. ಅವರ ಅಧಿಕಾರಾವಧಿಯಲ್ಲಿ ನೌಕರ ವೇತನ,ರಜೆ, ತುಟ್ಟಿಭತ್ಯೆ ಮತ್ತು ಪಿಂಚಣಿ ಬಗ್ಗೆ ಉತ್ತಮ ಹೋರಾಟ ನಡೆಸಿದ್ದರು. ಹಾಗಾಗಿ ಎಚ್. ಕೆ. ರಾಮು ರವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಜಗನ್ನಾಥ್, ಮೂಳೆ ತಜ್ಞ ಡಾ. ದಯಾನಂದ ಬಾಬು,ದಂತ ವೈದ್ಯೆ ಡಾ. ಕಮಲಮ್ಮ,ನಂದಿನಿ, ನಿಲವೇಣಿ ಡಾ. ಸೋಮನಾಯ್ಕ,ವಾಲ್ಮೀಕಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಹೇಶ್ ನಾಯಕ, ಗ್ರಾ. ಪಂ.ಸದಸ್ಯ ತುಂಬಲ ಸುರೇಶ ಇತರರು ಹಾಜರಿದ್ದರು.