ತುಮಕೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆಯ ಗವಿಮಠ ಬಳಿ ನಡೆದಿದೆ.
ಕುಣಿಗಲ್ ಕಡೆಯಿಂದ ಹಳೇವೂರು ಕಡೆಹೊಗುತ್ತಿದ್ದ ಬೈಕ್,ಮದ್ದೂರು ಕಡೆಯಿಂದ ಕುಣಿಗಲ್ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಹಳೇವೂರು ಮೂಲದವರಾದ ಮಹದೇವ್ (29) ಮೃತಪಟ್ಟಿದ್ದಾರೆ.
ಮಹದೇವ್ ಸೋಲೂರಿನ ಖಾಸಗಿ ಕಂಪನಿಯಲ್ಲಿ ವ್ಯವಸ್ಥಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು,
ಕುಣಿಗಲ್ ಪೋಲಿಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದುು ಪ್ರಕರಣ ದಾಖಲಿಸಿಕೊಂಡಿದ್ದಾರೆ.