ಇಂಥ ಕರಾಳ ಆದೇಶಕ್ಕೆ ರಾಜ್ಯ ಬಿಜೆಪಿ ಸರಕಾರ ಮತ್ತು ಶಿಕ್ಷಣ ಸಚಿವರೇ ನೇರ ಹೊಣೆ -ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ನಿಮಿತ್ತಒಂದು ಭಾರತಶ್ರೇಷ್ಠ ಭಾರತಕಾರ್ಯಕ್ರಮದಡಿ ಪ್ರೌಢಶಾಲೆ & ಪಿಯುಸಿ ವಿದ್ಯಾರ್ಥಿಗಳನ್ನು ಹೊರ ರಾಜ್ಯಗಳ ಪ್ರವಾಸಕ್ಕೆ ಕರೆದೊಯ್ಯಲು ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನೇ ಆಯ್ಕೆ ಮಾಡುವಂತೆ ಆದೇಶಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಾಧ್ಯಮಗಳಲ್ಲಿ ವರದಿಯಾಗಿರುವ ಆಘಾತಕಾರಿ ಸುದ್ದಿ ನನಗೆ ತೀವ್ರ ಕಳವಳ ಉಂಟು ಮಾಡಿದೆ. ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನು ಮಾತ್ರ ಪ್ರವಾಸಕ್ಕೆ ಆಯ್ಕೆ ಮಾಡುವಂತೆ ಬೆಂಗಳೂರು ಡಿಡಿಪಿಐ ಆದೇಶ ನೀಡಿರುವುದು ಕನ್ನಡಕ್ಕೆ ಬಗೆದಿರುವ ಘೋರ ದ್ರೋಹ.

ಇಂಥ ಕರಾಳ ಆದೇಶಕ್ಕೆ ರಾಜ್ಯ ಬಿಜೆಪಿ ಸರಕಾರ ಮತ್ತು ಶಿಕ್ಷಣ ಸಚಿವರೇ ನೇರ ಹೊಣೆ. ಸರಕಾರಕ್ಕೆ ಗೊತ್ತಿಲ್ಲದೆಯೇ ಇಂಥ ಆದೇಶ ಬರಲು ಸಾಧ್ಯವೇ? ತಿಳಿಗೇಡಿ ಆಡಳಿತಕ್ಕೆ ಹಿಡಿದ ಕನ್ನಡಿ ಇದು. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರಗಳು ಅಧಿಕಾರಕ್ಕೆ ಬಂದ ಮೇಲೆ ಕನ್ನಡ ಮತ್ತು ಕರ್ನಾಟಕದ ಮೇಲೆ ದಬ್ಬಾಳಿಕೆ ಹೆಚ್ಚುತ್ತಲೇ ಇದೆ. ಕನ್ನಡವನ್ನೇ ಮೂಲೋತ್ಪಾಟನೆ ಮಾಡಿ, ಕನ್ನಡ ಅಸ್ಮಿತೆಯನ್ನೇ ಕಣ್ಮರೆಗೊಳಿಸುವ ಕಿರಾತಕ ಹುನ್ನಾರ ಇದಾಗಿದೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

Discover more from Valmiki Mithra

Subscribe now to keep reading and get access to the full archive.

Continue reading