ನವದೆಹಲಿ : ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಟಿ-ಟ್ವೆಂಟಿ ಸರಣಿ ಮುಕ್ತಾಯಗೊಂಡ ನಂತರ ಮುಂದಿನ ತಿಂಗಳು ಐರ್ಲೆಂಡ್ ವಿರುದ್ಧ ನಡೆಯಲಿರುವ ಎರಡು ಪಂದ್ಯಗಳ ಟಿ-ಟ್ವೆಂಟಿ ಸರಣಿಗೆ ತಂಡವನ್ನು ಪ್ರಕಟಿಸಿದ್ದು ಇದೇ ಮೊದಲ ಬಾರಿಗೆ ಮಹಾರಾಷ್ಟ್ರದ ಬಲಗೈ ಬ್ಯಾಟ್ಸ್‌ಮನ್ ರಾಹುಲ್ ತ್ರಿಪಾಠಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಐಪಿಎಲ್ ನ ಮೊದಲ ಆವೃತ್ತಿಯಲ್ಲಿಯೇ ಗುಜರಾತ್ ತಂಡವನ್ನು ಚಾಂಪಿಯನ್ ಮಾಡಿದ್ದ ಹಾರ್ದಿಕ್ ಪಾಂಡ್ಯ ಗೆ ಚೊಚ್ಚಲವಾಗಿ ನಾಯಕತ್ವ ಜವಾಬ್ದಾರಿವಹಿಸಲಾಗಿದ್ದು, ವೇಗದ ಬೌಲರ್ ಭುವನೇಶ್ವರ ಕುಮಾರ್ ಅವರಿಗೆ ಉಪ ನಾಯಕನ ಜವಾಬ್ದಾರಿಯನ್ನು ವಹಿಸಿದ್ದು ರಿಷಭ್ ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಈ ಸರಣಿಗೆ ಕಿರಿಯ ತಂಡದ ಕೋಚ್ ವಿವಿಎಸ್ ಲಕ್ಷ್ಮಣ್ ಮಾರ್ಗದರ್ಶನ ಮಾಡಲಿದ್ದಾರೆ.
ಹಿರಿಯ ಆಟಗಾರರನ್ನು ಒಳಗೊಂಡ ತಂಡ ಕೋಚ್ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲ್ಲಿದ್ದು ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ, ಇದೇ ಸಂದರ್ಭದಲ್ಲಿ ಮತ್ತೊಂದು ಸರಣಿಯ ಪ್ರಯುಕ್ತ ಐರ್ಲೆಂಡ್ ತಂಡವನ್ನು ಎದುರಿಸುವ ಭಾರತ ತಂಡ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.
ಕೇರಳದ ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ಸಂಜು ಸ್ಯಾಮ್‌ಸನ್ ಮತ್ತೊಮ್ಮೆ ರಾಷ್ಟ್ರೀಯ ತಂಡಕ್ಕೆ ಮರಳಿದ್ದಾರೆ, ಇನ್ನುಳಿದಂತೆ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್, ಚಹಾಲ್, ಅಕ್ಷರ್ ಪಟೇಲ್, ರವಿ ಬಿಷ್ಣೋಯಿ, ಹರ್ಷಲ್ ಪಟೇಲ್, ಆವೇಶ್ ಖಾನ್, ಅಷ೯ದೀಪ್ ಸಿಂಗ್ ಹಾಗೂ ಉಮ್ರಾನ್ ಮಲ್ಲಿಕ್ ಸ್ಥಾನ ಪಡೆದಿದ್ದಾರೆ.